ಗುರುವಾರ , ಫೆಬ್ರವರಿ 9, 2023
30 °C

49 ಎಸೆತಗಳಲ್ಲಿ ಸೂರ್ಯ ಶತಕ; ಟಿಮ್ ಸೌಥಿ ಹ್ಯಾಟ್ರಿಕ್ ವಿಕೆಟ್ ಸಾಧನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮೌಂಟ್ ಮಾಂಗನೂಯಿ: ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಎರಡನೇ ಶತಕದ ಸಾಧನೆ ಮಾಡಿದ್ದಾರೆ. 

ಮೌಂಟ್ ಮಾಂಗನೂಯಿಯಲ್ಲಿ ಆತಿಥೇಯ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಕೇವಲ 49 ಎಸೆತಗಳಲ್ಲಿ ಶತಕ ಗಳಿಸಿದರು. 

ಈ ಮೂಲಕ ರೋಹಿತ್ ಶರ್ಮಾ ಬಳಿಕ ಕ್ಯಾಲೆಂಡರ್ ವರ್ಷದಲ್ಲಿ ಎರಡು ಶತಕ ಗಳಿಸಿದ ಭಾರತದ ಎರಡನೇ ಬ್ಯಾಟರ್ ಎನಿಸಿದರು. 

ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರುವ ಸೂರ್ಯ, ಮಗದೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದರು. 

ಸೂರ್ಯಕುಮಾರ್ 51 ಎಸೆತಗಳಲ್ಲಿ 111 ರನ್ ಗಳಿಸಿ ಔಟಾಗದೆ ಉಳಿದರು. ಅವರ ಇನ್ನಿಂಗ್ಸ್‌ನಲ್ಲಿ ಏಳು ಸಿಕ್ಸರ್ ಹಾಗೂ 11 ಬೌಂಡರಿಗಳು ಸೇರಿದ್ದವು. 

ಸೌಥಿ ಹ್ಯಾಟ್ರಿಕ್ ಸಾಧನೆ...
ಮತ್ತೊಂದೆಡೆ ನ್ಯೂಜಿಲೆಂಡ್ ಬೌಲರ್ ಟಿಮ್ ಸೌಥಿ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡನೇ ಸಲ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ. 

ಇನ್ನಿಂಗ್ಸ್‌ನ ಅಂತಿ ಓವರ್‌ನಲ್ಲಿ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ ಮತ್ತು ವಾಷಿಂಗ್ಟನ್ ಸುಂದರ್‌ರನ್ನು ಹೊರದಬ್ಬಿದ ಸೌಥಿ, ಹ್ಯಾಟ್ರಿಕ್ ವಿಕೆಟ್ ಗಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು