ಶುಕ್ರವಾರ, ಆಗಸ್ಟ್ 12, 2022
23 °C

WTC FINAL: ವಿಲನ್ ಆದ ಮಳೆ; ಮೀಮ್ಸ್ ವೈರಲ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಸೌತಾಂಪ್ಟನ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯಾಗಿದೆ.

ಇಂಗ್ಲೆಂಡ್‌ನ ಸೌತಾಂಪ್ಟನ್‌ನ ರೋಸ್ ಬೌಲ್ ಮೈದಾನದಲ್ಲಿ 'ಕೋವಿಡ್ ಜೀವ ಸುರಕ್ಷಾ ವಲಯ'ದಲ್ಲಿ ಚೊಚ್ಚಲ ಡಬ್ಲ್ಯು‌ಟಿಸಿ ಫೈನಲ್ ಪಂದ್ಯವನ್ನು ಆಯೋಜಿಸಲಾಗುತ್ತಿದೆ.

ಆದರೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪಂದ್ಯ ಆರಂಭವು ವಿಳಂಬವಾಗಿದೆ. ಅತ್ತ ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ಮೀಮ್ಸ್‌ಗಳು ವೈರಲ್ ಆಗಿದೆ.

ಇದನ್ನೂ ಓದಿ: 

ಏಕದಿನ ವಿಶ್ವಕಪ್‌ಗೆ ಸಮಾನವಾಗಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಅನ್ನು ಐಸಿಸಿ ಆಯೋಜಿಸಿದೆ. ಕಳೆದೆರಡು ವರ್ಷಗಳಲ್ಲಿ ಉಭಯ ಸರಣಿಗಳ ಬಳಿಕ ಅಗ್ರ ಎರಡು ಸ್ಥಾನಗಳನ್ನು ಹೊಂದಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಫೈನಲ್‌ಗೆ ಪ್ರವೇಶಿಸಿವೆ.

ಕೋವಿಡ್ ಸಾಂಕ್ರಾಮಿಕ ರೋಗದ ನಡುವೆ ಕ್ರಿಕೆಟಿಗರು ಅಭಿಮಾನಿಗಳಿಗೆ ರಸದೌತಣ ನೀಡಲು ಸಜ್ಜಾಗಿದ್ದಾರೆ. ಈ ನಡುವೆ ಮಳೆಯು 'ವಿಲನ್' ರೂಪದಲ್ಲಿ ಪ್ರವೇಶ ಪಡೆದಿದೆ.

ಈ ಕುರಿತು ಕೆಲವು ಆಕರ್ಷಕ ಮೀಮ್ಸ್‌ಗಳನ್ನು ಇಲ್ಲಿ ಹಂಚಲಾಗಿದೆ. ನೀವೂ ಆನಂದಿಸಿ...

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು