ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs NZ WTC Final: ಧೋನಿ ದಾಖಲೆ ಮುರಿದ ಕಿಂಗ್ ಕೊಹ್ಲಿ

ಅಕ್ಷರ ಗಾತ್ರ

ಸೌತಾಂಪ್ಟನ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಐಸಿಸಿ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದಲ್ಲಿ ಆಡುವ ಮೂಲಕ ನೂತನ ದಾಖಲೆ ಬರೆದಿದ್ದಾರೆ.

ಮಾಜಿ ಕಪ್ತಾನ ಮಹೇಂದ್ರ ಸಿಂಗ್ ಧೋನಿ ದಾಖಲೆ ಮುರಿದಿರುವ ಕಿಂಗ್ ಕೊಹ್ಲಿ, ಭಾರತದ ಪರ ಅತಿ ಹೆಚ್ಚು ಟೆಸ್ಟ್ ಪಂದ್ಯಗಳಲ್ಲಿ ನಾಯಕತ್ವ ವಹಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ.

ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಕೊಹ್ಲಿ ಈ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮಹಿ ಹಿಂದಿಕ್ಕಿರುವ ವಿರಾಟ್ ದಾಖಲೆಯ 61ನೇ ಬಾರಿಗೆ ಭಾರತ ತಂಡವನ್ನು ಟೆಸ್ಟ್ ಪಂದ್ಯಗಳಲ್ಲಿ ಮುನ್ನೆಡೆಸಿದ್ದಾರೆ. ಈ ಪೈಕಿ 36 ಗೆಲುವು, 14 ಸೋಲು ಹಾಗೂ 10 ಪಂದ್ಯಗಳಲ್ಲಿ ಡ್ರಾ ಫಲಿತಾಂಶವನ್ನು ದಾಖಲಿಸಿದ್ದಾರೆ.

ಅತ್ತ ಧೋನಿ ನಾಯಕತ್ವದಲ್ಲಿ ಭಾರತವು ಆಡಿರುವ 60 ಪಂದ್ಯಗಳಲ್ಲಿ 27 ಗೆಲುವು, 18 ಸೋಲು ಹಾಗೂ 15 ಡ್ರಾ ಫಲಿತಾಂಶವನ್ನು ಕಂಡಿತ್ತು.

ಆಗಲೇ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಪಟ್ಟ ಗಿಟ್ಟಿಸಿರುವ ವಿರಾಟ್ ಕೊಹ್ಲಿ, ಒಟ್ಟಾರೆಯಾಗಿ ವಿಶ್ವ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ನಾಯಕತ್ವ ವಹಿಸಿರುವ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ಮಾಜಿ ಕಪ್ತಾನ ಗ್ರೇಮ್ ಸ್ಮಿತ್ 109 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದಾರೆ.

ಏಷ್ಯಾದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಕಪ್ತಾನಗಿರಿ ವಹಿಸಿದ ದಾಖಲೆಯೂ ಕೊಹ್ಲಿ ಹೆಸರಲ್ಲಿದೆ. ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಮತ್ತು ಶ್ರೀಲಂಕಾದ ಮಾಜಿ ನಾಯಕ ಅರ್ಜುನ್ ರಣತುಂಗ ತಲಾ 56 ಪಂದ್ಯಗಳಲ್ಲಿ ತಮ್ಮ ತಮ್ಮ ತಂಡಗಳನ್ನು ಮುನ್ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT