ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs SA: ಮಯಂಕ್, ರಾಹುಲ್ ಅರ್ಧಶತಕ; ಟೀ ವಿರಾಮಕ್ಕೆ ಭಾರತ 157/2

Last Updated 26 ಡಿಸೆಂಬರ್ 2021, 13:04 IST
ಅಕ್ಷರ ಗಾತ್ರ

ಸೆಂಚುರಿಯನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚುರಿಯನ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸುತ್ತಿರುವ ಟೀಮ್ ಇಂಡಿಯಾ, ಟೀ ವಿರಾಮದ ಹೊತ್ತಿಗೆ 57 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರ ಸರಿ ಎಂದು ನಿರೂಪಿಸಿದ ಆರಂಭಿಕರಾದ ಕೆ.ಎಲ್. ರಾಹುಲ್ ಹಾಗೂ ಮಯಂಕ್ ಅಗರವಾಲ್ ಉತ್ತಮ ಆರಂಭ ಒದಗಿಸಿದರು.

ಕನ್ನಡಿಗರಾದ ರಾಹುಲ್-ಮಯಂಕ್ ಆಕರ್ಷಕ ಅರ್ಧಶತಕವನ್ನು ಗಳಿಸಿದ್ದರಲ್ಲದೆ ಮೊದಲ ವಿಕೆಟ್‌ಗೆ ಶತಕದ (117 ರನ್) ಜೊತೆಯಾಟ ನೀಡಿದರು.

ಈ ಹಂತದಲ್ಲಿ ಉತ್ತಮವಾಗಿ ಆಡುತ್ತಿದ್ದ ಅಗರವಾಲ್ ಜತೆ ಚೇತೇಶ್ವರ್ ಪೂಜಾರ (0) ಅವರನ್ನು ಲುಂಗಿ ಗಿಡಿ ಪೆವಿಲಿಯನ್‌ಗೆ ಅಟ್ಟಿದರು. 123 ಎಸೆತಗಳನ್ನು ಎದುರಿಸಿದ ಅಗರವಾಲ್ ಒಂಬತ್ತು ಬೌಂಡರಿಗಳ ನೆರವಿನಿಂದ 60 ರನ್ ಗಳಿಸಿದರು. ಮೊದಲ ಎಸೆತದಲ್ಲೇ ಔಟ್ ಆದ ಪೂಜಾರ ನಿರಾಸೆ ಮೂಡಿಸಿದರು.

ಬಳಿಕ ನಾಯಕ ವಿರಾಟ್ ಕೊಹ್ಲಿ (19*) ಅವರೊಂದಿಗೆ ಜೊತೆಗೂಡಿದ ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. 166 ಎಸೆತಗಳನ್ನು ಎದುರಿಸಿರುವ ರಾಹುಲ್ 68 ರನ್ ಗಳಿಸಿ ಕ್ರೀಸಿನಲ್ಲಿದ್ದಾರೆ. ನಾಯಕ ಕೊಹ್ಲಿ ಸಹ ಉತ್ತಮ ಲಯದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT