ಶುಕ್ರವಾರ, ಡಿಸೆಂಬರ್ 9, 2022
21 °C

IND vs SA 2nd T20| ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ: ಭಾರತ ಬ್ಯಾಟಿಂಗ್‌ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುವಾಹಟಿ:  ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಬ್ಯಾಟಿಂಗ್‌ ಮಾಡಲು ಆಹ್ವಾನ ನೀಡಿದೆ. 

ಅಸ್ಸಾಂ ರಾಜಧಾನಿಯ ಬರ್ಸಾಪುರದಲ್ಲಿರುವ ಡಾ.ಭೂಪೆನ್ ಹಜಾರಿಕಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. 

ತಿರುವನಂತಪುರದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಗೆದ್ದಿರುವ ಭಾರತ ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿಸಿದೆ. ಈ ಪಂದ್ಯವನ್ನೂ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಇರಾದೆ ಟೀಂ ಇಂಡಿಯಾದ್ದು. ಆದರೆ, ಸರಣಿಯನ್ನು ಜೀವಂತವಾಗಿಡಬೇಕಿದ್ದರೆ ದಕ್ಷಿಣ ಆಫ್ರಿಕಾ ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ. 

ಇನ್ನೊಂದೆಡೆ, ಜಸ್‌ಪ್ರೀತ್ ಬೂಮ್ರಾ ಇಲ್ಲದ ಬೌಲಿಂಗ್ ಪಡೆಯನ್ನು ಸಮತೋಲನಗೊಳಿಸುವ ಸವಾಲು ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ಬಳಗದ ಮುಂದಿದೆ.

ಟಿಕೆಟ್ ಸೋಲ್ಡ್‌ ಔಟ್

ಎರಡು ವರ್ಷಗಳ ನಂತರ ಇಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆಯುತ್ತಿರುವುದರಿಂದ ವೀಕ್ಷಣೆಗೆ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಎಲ್ಲ ಟಿಕೆಟ್‌ಗಳೂ ಮಾರಾಟವಾಗಿವೆ. 

‘38 ಸಾವಿರ ಆಸನ ಸಾಮರ್ಥ್ಯವಿರುವ ಕ್ರೀಡಾಂಗಣದಲ್ಲಿ 21,200 ಟಿಕೆಟ್‌ಗಳನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಉಳಿದದ್ದು ಕ್ಲಬ್‌ಗಳು, ಗಣ್ಯರು, ಪದಾಧಿಕಾರಿಗಳಿಗಾಗಿ ಮೀಸಲಾಗಿವೆ. ಜನರಿಂದ ಅಪಾರ ಬೇಡಿಕೆ ಬಂದಿದೆ’ ಎಂದು ಅಸ್ಸಾಂ ಕ್ರಿಕೆಟ್ ಸಂಸ್ಥೆ ಮೂಲಗಳು ತಿಳಿಸಿವೆ. 

ಪಿಚ್ ಪರಿಸ್ಥಿತಿ?

ಇಲ್ಲಿ ಈ ಹಿಂದೆ ನಡೆದಿರುವ ಐದು ಪಂದ್ಯಗಳಲ್ಲಿ ಬೃಹತ್ ಮೊತ್ತಗಳು ದಾಖಲಾಗಿಲ್ಲ. 160 ರನ್‌ ಇಲ್ಲಿ ದಾಖಲಾಗಿರುವ ಗರಿಷ್ಠ ಮೊತ್ತವಾಗಿದೆ. ಬೌಲರ್‌ಗಳಿಗೇ ಹೆಚ್ಚು ನೆರವು ಸಿಗುವ ಸಾಧ್ಯತೆ ಇದೆ. 

ಭಾರತ ತಂಡ

ರೋಹಿತ್‌ ಶರ್ಮಾ, ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯ ಕುಮಾರ್‌ ಯಾದವ್‌, ರಿಷಭ್‌ ಪಂತ್‌, ದಿನೇಶ್‌ ಕಾರ್ತಿಕ್‌, ಹರ್ಷಲ್‌ ಪಟೇಲ್‌, ಅಕ್ಷರ್‌ ಪಟೇಲ್‌, ರವಿಚಂದ್ರನ್‌ ಅಶ್ವಿನ್‌, ದೀಪಕ್‌ ಚಾಹರ್‌, ಅರ್ಷದೀಪ್‌ ಸಿಂಗ್‌. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು