ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

IND vs SA: ಪೂಜಾರ 3, ರಹಾನೆ ಗೋಲ್ಡನ್ ಡಕ್; ವ್ಯಾಪಕ ಟ್ರೋಲ್‌ಗೆ ಗುರಿ

ಜೋಹಾನ್ಸ್‌ಬರ್ಗ್: ಭಾರತ ಟೆಸ್ಟ್ ಕ್ರಿಕೆಟ್ ತಂಡದ ಅನುಭವಿ ಬ್ಯಾಟರ್‌ ಚೇತೇಶ್ವರ ಪೂಜಾರ ಹಾಗೂ ಅಜಿಂಕ್ಯ ರಹಾನೆ ಅವರ ಕಳಪೆಬ್ಯಾಟಿಂಗ್ ಪ್ರದರ್ಶನ ಮುಂದುವರಿದಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ಸೋಮವಾರ ಆರಂಭವಾಗಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲೂ ವೈಫಲ್ಯ ಅನುಭವಿಸಿದ್ದಾರೆ.

ಸತತ ಎರಡು ಎಸೆತಗಳಲ್ಲಿ ಔಟ್ ಆಗುವ ಮೂಲಕ ಪೂಜಾರ ಹಾಗೂ ರಹಾನೆ ನಿರಾಸೆ ಮೂಡಿಸಿದರು. ಪೂಜಾರ 3 ರನ್ನಿಗೆ ಔಟ್ ಆದರು. ಅತ್ತ ರಹಾನೆ ಇದೇ ಮೊದಲ ಬಾರಿಗೆ 'ಗೋಲ್ಡನ್ ಡಕ್' ಅಪಖ್ಯಾತಿಗೆ ಒಳಗಾದರು.

ಕಳಪೆ ಬ್ಯಾಟಿಂಗ್ ಫಾರ್ಮ್‌ನಿಂದಾಗಿ ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನ ರಹಾನೆ ಉಪನಾಯಕನ ಪಟ್ಟವನ್ನು ಕಳೆದುಕೊಂಡಿದ್ದರು. ಅಲ್ಲದೆ ಕಳೆದ 34 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 26.90ರ ಸರಾಸರಿಯಲ್ಲಿ 888 ರನ್ ಗಳಿಸಲು ಮಾತ್ರ ಯಶಸ್ವಿಯಾಗಿದ್ದಾರೆ. ಇದರಲ್ಲಿ ಒಂದು ಶತಕ ಒಳಗೊಂಡಿದೆ.

ಕಳಪೆ ಬ್ಯಾಟಿಂಗ್ ಪ್ರದರ್ಶನ ತೋರಿರುವ ಪೂಜಾರ ಹಾಗೂ ರಹಾನೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT