ಮುಂಬೈ:ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಏಕದಿನ ಕ್ರಿಕೆಟ್ ಸರಣಿಯನ್ನು ರದ್ದು ಪಡಿಸಲು ತೀರ್ಮಾನಿಸಲಾಗಿದ್ದು, ಇನ್ನೊಮ್ಮೆ ಸರಣಿ ಆಯೋಜಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ.ಕೋವಿಡ್–19 ವೈರಸ್ ಭೀತಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

‘ಏಕದಿನ ಸರಣಿಯ ವೇಳಾಪಟ್ಟಿಯನ್ನುಬಿಸಿಸಿಐ ಹಾಗೂ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ (ಸಿಎಸ್ಎ) ಒಟ್ಟಾಗಿ ಮರುಹೊಂದಾಣಿಕೆ ಮಾಡಲಿವೆ. ಮೂರು ಪಂದ್ಯಗಳ ಸರಣಿ ಆಡಲು ದಕ್ಷಿಣ ಆಫ್ರಿಕಾ ಮತ್ತೆ ಭಾರತಕ್ಕೆ ಬರಲಿದೆ’ ಎಂದು ಬಿಸಿಸಿಐ ಅಧಿಕೃತ ಹೇಳಿಕೆ ನೀಡಿದೆ.

ಧರ್ಮಶಾಲಾದಲ್ಲಿ ಆಯೋಜನೆಯಾಗಿದ್ದ ಮೊದಲ ಏಕದಿನಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಎರಡು ಮತ್ತು ಮೂರನೇ ಪಂದ್ಯಗಳು ಕ್ರಮವಾಗಿಲಖನೌ ಹಾಗೂ ಕೋಲ್ಕತ್ತದಲ್ಲಿ ನಿಗದಿಯಾಗಿದ್ದವು.

ಲಖನೌ ಹಾಗೂ ಕೋಲ್ಕತ್ತದಲ್ಲಿ ಪಂದ್ಯಗಳನ್ನು ಪ್ರೇಕ್ಷಕರು ಕ್ರೀಡಾಂಗಣಕ್ಕೆ ಬರುವುದಕ್ಕೆ ಅವಕಾಶ ನಿರಾಕರಿಸಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಗುರುವಾರ ಬಿಸಿಸಿಐ ಹೇಳಿತ್ತು. ಆದರೆ, ಇದೀಗ ಸರಣಿಯನ್ನು ರದ್ದುಪಡಿಸಲಾಗಿದೆ.

ಈ ನಿರ್ಧಾರಕ್ಕೂ ಮುನ್ನ ಬಿಸಿಸಿಐ, ಇದೇ ತಿಂಗಳು 29 ದಿಂದ ಆರಂಭವಾಗಬೇಕಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯನ್ನು ಏಪ್ರಿಲ್ 15ಕ್ಕೆ ಮುಂದೂಡಿತ್ತು.

ಪ್ರಪಂಚದಾದ್ಯಂತ 1 ಲಕ್ಷಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಂಡಿರುವ ಕೋವಿಡ್–19 ಸೋಂಕು ಭಾರತದಲ್ಲಿಸುಮಾರು 80ಕ್ಕೂ ಹೆಚ್ಚು ಮಂದಿಯಲ್ಲಿ ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.