ರಾಯಪುರ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 358 ರನ್ಗಳ ಬೃಹತ್ ಮೊತ್ತ ಕಲೆಹಾಕಿದೆ.

ಭಾರತದ ಪರ ವಿರಾಟ್ ಕೊಹ್ಲಿ (102, 93 ಎಸೆತ, 7 ಬೌಂಡರಿ, 2 ಸಿಕ್ಸರ್), ಋತುರಾಜ್ ಗಾಯಕವಾಡ್ (105: 83 ಎ, 12 ಬೌಂಡರಿ, 2 ಸಿಕ್ಸರ್) ಹಾಗೂ ನಾಯಕ ಕೆ.ಎಲ್ ರಾಹುಲ್ ಅವರ ಅಜೇಯ 66 ರನ್ಗಳ ನೆರವಿನಿಂದ ದಕ್ಷಿಣ ಆಫ್ರಿಕಾ ಗೆಲುವಿಗೆ 359 ರನ್ಗಳ ಬೃಹತ್ ಟಾರ್ಗೆಟ್ ನೀಡಿತು,

ದಕ್ಷಿಣ ಆಫ್ರಿಕಾ ಪರ ಮಾರ್ಕೊ ಜಾನ್ಸನ್ 2 ವಿಕೆಟ್ ಪಡೆದುಕೊಂಡರು. ನಾಂಡ್ರೆ ಬರ್ಜರ್ ಹಾಗೂ ಲುಂಗಿ ಎನ್ಗಿಡಿ ತಲಾ ಒಂದೊಂದು ವಿಕೆಟ್ ಪಡೆದರು.

ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಅತೀ ಹೆಚ್ಚು ರನ್

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಗಳಿಸಿದ ಎರಡನೇ ಅತ್ಯಧಿಕ ರನ್ ಎಂಬ ದಾಖಲೆಗೂ ಇಂದಿನ ಪಂದ್ಯ ಸಾಕ್ಷಿಯಾಯಿತು. 2010ರಲ್ಲಿ ಗಳಿಸಿದ 401/3 ಅತ್ಯಧಿಕ ರನ್ ಆದರೆ, ಇದು ಎರಡನೇ ಅತ್ಯಧಿಕ ಮೊತ್ತವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.