ಕೋಲ್ಕತ್ತ: ಆತಿಥೇಯ ಭಾರತ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಶುಭಮನ್ ಗಿಲ್ ನಾಯಕತ್ವದಲ್ಲಿ ಉತ್ತಮ ನಿರ್ವಹಣೆ ನೀಡುವ ನಿರೀಕ್ಷೆಯಲ್ಲಿದೆ.

ಗಾಯಮುಕ್ತಗೊಂಡಿರುವ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್ ತಂಡಕ್ಕೆ ಪುನರಾಗಮನ ಮಾಡಿಕೊಂಡಿದ್ದಾರೆ.

ಯಶಸ್ವಿ ಜೈಸ್ವಾಲ್ ಜೊತೆಗೆ ಕನ್ನಡಿಗ ಕೆ.ಎಲ್. ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಭಾರತ ತಂಡದಲ್ಲಿ ಮೂವರು ಆಲ್ರೌಂಡರ್ ಸೇರಿದಂತೆ ಆರು ಮಂದಿ ಬೌಲರ್ಗಳು ಕಾಣಿಸಿಕೊಂಡಿದ್ದಾರೆ.

ರವೀಂದ್ರ ಜಡೇಜ, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಆಡುವ ಬಳಗದಲ್ಲಿದ್ದಾರೆ. ಹಾಗೆಯೇ ಕುಲದೀಪ್ ಯಾದವ್ ತಂಡದಲ್ಲಿದ್ದಾರೆ.

ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಹೊಣೆ ವಹಿಸಲಿದ್ದಾರೆ.
.IND vs SA 1st Test: ಭಾರತದ ಬ್ಯಾಟರ್ಗಳಿಗೆ 'ಸ್ಪಿನ್ ಟೆಸ್ಟ್'.IND vs SA Test Cricket: ಪಂತ್ ನೆರಳಿನಿಂದ ಹೊರಬಂದ ಜುರೆಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.