IND vs SL: ಬೂಮ್ರಾ ಬೌಲಿಂಗ್ ದಾಳಿಗೆ ತತ್ತರಿಸಿದ ಲಂಕಾ ಪಡೆ, 109 ರನ್ಗೆ ಅಲೌಟ್

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ 5 ವಿಕೆಟ್ ಪಡೆದು ಮಿಂಚಿದ್ದಾರೆ.
ಭಾನುವಾರ ಎರಡನೇ ದಿನದಾಟ ಆರಂಭಿಸಿದ ಶ್ರೀಲಂಕಾ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ 35.5 ಓವರ್ಗಳಲ್ಲಿ 109 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮೊದಲ ಇನ್ನಿಂಗ್ಸ್ನಲ್ಲಿ ಭಾರತ 143 ರನ್ಗಳ ಮಹತ್ವದ ಮುನ್ನಡೆ ಗಳಿಸಿದೆ.
ಭಾರತದ ಪರ ಜಸ್ಪ್ರೀತ್ ಬೂಮ್ರಾ 5, ಆರ್. ಅಶ್ವಿನ್ ಹಾಗೂ ಮೊಹಮ್ಮದ್ ಶಮಿ ತಲಾ 2, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.
ಸದ್ಯ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ 5 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 10 ರನ್ ಗಳಿಸಿದೆ. ಮಯಂಕ್ ಅಗರವಾಲ್, ರೋಹಿತ್ ಶರ್ಮಾ ಕ್ರೀಸ್ನಲ್ಲಿದ್ದಾರೆ.
A five-wkt haul for @Jaspritbumrah93, two wickets apiece for Shami and Ashwin and 1 wicket for Axar as Sri Lanka are all out for 109 in the first innings.#TeamIndia second innings underway.
Scorecard - https://t.co/t74OLq7xoO #INDvSL @Paytm pic.twitter.com/LJKVFJYP1E
— BCCI (@BCCI) March 13, 2022
ಭಾರತ ಶನಿವಾರ ಮೊದಲ ಇನ್ನಿಂಗ್ಸ್ನಲ್ಲಿ 59.1 ಓವರ್ಗಳಲ್ಲಿ 252 ರನ್ ಗಳಿಸಿ ಆಲೌಟ್ ಆಗಿತ್ತು. ಶ್ರೇಯಸ್ ಅಯ್ಯರ್ ಅರ್ಧಶತಕ ಗಳಿಸಿ ತಂಡಕ್ಕೆ ಆಸರೆಯಾದರು.
253 ರನ್ ಗುರಿ ಬೆನ್ನತ್ತಿದ್ದ ಶ್ರೀಲಂಕಾ ಮೊದಲ ದಿನದಾಟದ ಅಂತ್ಯಕ್ಕೆ 6 ನಷ್ಟಕ್ಕೆ 86 ರನ್ ಗಳಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.