ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs SL: ಬೆಂಗಳೂರಿನಲ್ಲಿ ಪಿಂಕ್ ಬಾಲ್ ಟೆಸ್ಟ್; ದಾಖಲೆಯ ಹೊಸ್ತಿಲಲ್ಲಿ ಜಡೇಜ

Last Updated 11 ಮಾರ್ಚ್ 2022, 10:01 IST
ಅಕ್ಷರ ಗಾತ್ರ

ಬೆಂಗಳೂರು: ಮೊಹಾಲಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಲ್‌ರೌಂಡರ್ ಪ್ರದರ್ಶನ ನೀಡಿರುವ ರವೀಂದ್ರ ಜಡೇಜ, ಮಗದೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್‌ಗಳ ಮೈಲಿಗಲ್ಲು ತಲುಪಲು ಜಡೇಜ ಅವರಿಗೆ ಒಂಬತ್ತು ವಿಕೆಟ್‌ಗಳ ಅಗತ್ಯವಿದೆ.

ಬೆಂಗಳೂರಿನಲ್ಲಿ ಶನಿವಾರದಿಂದ ಆರಂಭವಾಗಲಿರುವ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಜಡೇಜ ಈ ದಾಖಲೆ ಬರೆಯುವ ಇರಾದೆಯಲ್ಲಿದ್ದಾರೆ.

ಈ ಮೂಲಕ ರವಿಚಂದ್ರನ್ ಅಶ್ವಿನ್ ಹಾಗೂ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗದಲ್ಲಿ 250 ವಿಕೆಟ್ ಗಳಿಸಿದ ಭಾರತದ ಮೂರನೇ ಬೌಲರ್ ಎನಿಸಿಕೊಳ್ಳಲಿದ್ದಾರೆ.

ಇದುವರೆಗೆ ಜಡೇಜ 58 ಟೆಸ್ಟ್ ಪಂದ್ಯಗಳಲ್ಲಿ 241 ವಿಕೆಟ್‌ ಗಳಿಸಿದ್ದಾರೆ. 10 ಬಾರಿ ಐದು ವಿಕೆಟ್ ಸಾಧನೆ ಮಾಡಿದ್ದಾರೆ.

ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ಅಜೇಯ 175 ರನ್ ಹಾಗೂ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಕಬಳಿಸಿದ ಜಡೇಜ, ಐಸಿಸಿ ರ‍್ಯಾಂಕಿಂಗ್‌ನಲ್ಲಿ ನಂ.1 ಟೆಸ್ಟ್ ಆಲ್‌ರೌಂಡರ್ ಆಗಿ ಹೊರಹೊಮ್ಮಿದ್ದರು.

ಬೆಂಗಳೂರಿನಲ್ಲಿ ನಡೆಯಲಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲೇ ರನ್ ಮೆಶಿನ್ ಖ್ಯಾತಿಯ ವಿರಾಟ್ ಕೊಹ್ಲಿ ಶತಕದ ಬರ ನೀಗಿಸುವ ಇರಾದೆಯಲ್ಲಿದ್ದಾರೆ.

ರವೀಂದ್ರ ಜಡೇಜ ಟೆಸ್ಟ್ ವೃತ್ತಿಜೀವನ:
ಪಂದ್ಯ: 58
ಇನ್ನಿಂಗ್ಸ್: 110
ರನ್: 2370
ಅಜೇಯ: 20
ಗರಿಷ್ಠ: 175
ಸರಾಸರಿ: 36.46
ಶತಕ: 2
ಅರ್ಧಶತಕ: 17
ವಿಕೆಟ್: 241
5 ವಿಕೆಟ್ (ಇನ್ನಿಂಗ್ಸ್‌): 10
10 ವಿಕೆಟ್ (ಪಂದ್ಯದಲ್ಲಿ): 1
ಅತ್ಯುತ್ತಮ ಬೌಲಿಂಗ್: 7/48

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT