ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

IND vs SL | 27 ವರ್ಷಗಳಲ್ಲಿ ಶ್ರೀಲಂಕಾ ವಿರುದ್ಧ ಸರಣಿ ಸೋಲಿನ ಭೀತಿಯಲ್ಲಿ ಭಾರತ

Published : 6 ಆಗಸ್ಟ್ 2024, 9:36 IST
Last Updated : 6 ಆಗಸ್ಟ್ 2024, 9:36 IST
ಫಾಲೋ ಮಾಡಿ
Comments

ಕೊಲಂಬೊ: ಪ್ರವಾಸಿ ಭಾರತ ಹಾಗೂ ಶ್ರೀಲಂಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ಬುಧವಾರ (ಆಗಸ್ಟ್ 07) ನಡೆಯಲಿದೆ.

ಸರಣಿಯಲ್ಲಿ ಸಮಬಲ ಸಾಧಿಸಲು ಭಾರತ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಮೊದಲ ಪಂದ್ಯ ರೋಚಕ 'ಟೈ' ಕಂಡಿದ್ದರೆ ಎರಡನೇ ಪಂದ್ಯದಲ್ಲಿ ಭಾರತ 32 ರನ್ ಅಂತರದ ಸೋಲಿಗೆ ಶರಣಾಗಿತ್ತು.

27 ವರ್ಷಗಳಲ್ಲಿ ಲಂಕಾ ವಿರುದ್ಧ ಮೊದಲ ಸರಣಿ ಸೋಲಿನ ಭೀತಿಯಲ್ಲಿ ಭಾರತ...

27 ವರ್ಷಗಳಲ್ಲಿ ಶ್ರೀಲಂಕಾ ವಿರುದ್ಧ ಭಾರತ ಮೊದಲ ಸರಣಿ ಸೋಲಿನ ಭೀತಿಯಲ್ಲಿದೆ. 1997ರಲ್ಲಿ ನಡೆದಿದ್ದ ಏಕದಿನ ಸರಣಿಯಲ್ಲಿ ಶ್ರೀಲಂಕಾ ವಿರುದ್ಧ ಭಾರತ ಕೊನೆಯ ಬಾರಿ ಸೋಲು ಕಂಡಿತ್ತು.

ಅಂದು ಅರ್ಜುನ ರಣತುಂಗ ನಾಯಕತ್ವದ ಲಂಕಾ ಪಡೆಯು ಸಚಿನ್ ತೆಂಡೂಲ್ಕರ್ ನೇತೃತ್ವದ ಭಾರತದ ವಿರುದ್ಧ 3-0ರ ಅಂತರದ ಕ್ಲೀನ್‌ಸ್ವೀಪ್ ಜಯ ಸಾಧಿಸಿತ್ತು.

ಅದಾದ ಬಳಿಕ ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವೆ 11 ಏಕದಿನ ಸರಣಿ ಆಯೋಜನೆಗೊಂಡಿದ್ದು, ಪ್ರತಿ ಸಲವೂ ಭಾರತ ಜಯ ಸಾಧಿಸಿತ್ತು.

ಕಳಪೆ ಬ್ಯಾಟಿಂಗ್ ಲಯದಲ್ಲಿರುವ ವಿರಾಟ್ ಕೊಹ್ಲಿ...

ವಿರಾಟ್ ಕೊಹ್ಲಿ ಮೊದಲೆರಡು ಪಂದ್ಯಗಳಲ್ಲಿ ಅನುಕ್ರಮವಾಗಿ 24 ಹಾಗೂ 14 ರನ್ನಿಗೆ ಔಟ್ ಆಗಿದ್ದರು. ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಲಯ ಕಂಡುಕೊಳ್ಳುವುದು ಮುಖ್ಯವೆನಿಸಿದೆ.

ಸರಣಿಯ ಎರಡೂ ಪಂದ್ಯಗಳಲ್ಲಿ ಶ್ರೀಲಂಕಾದ ಸ್ಪಿನ್ ದಾಳಿಗೆ ಭಾರತೀಯ ಬ್ಯಾಟರ್‌ಗಳಿಂದ ತಕ್ಕ ಉತ್ತರ ನೀಡಲು ಸಾಧ್ಯವಾಗಿಲ್ಲ. ನಾಯಕ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಉತ್ತಮ ಆರಂಭ ನೀಡಿರುವ ಹೊರತಾಗಿಯೂ ಮಧ್ಯಮ ಹಾಗೂ ಕೆಳ ಕ್ರಮಾಂಕದ ಬ್ಯಾಟರ್‌ಗಳು ದಿಢೀರ್ ಕುಸಿತವನ್ನು ಕಂಡಿದ್ದರು. ಈ ಎಲ್ಲ ಸವಾಲನ್ನು ಭಾರತವು ಮೆಟ್ಟಿ ನಿಲ್ಲಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT