ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Asia Cup | IND vs SL: ಶ್ರೀಲಂಕಾ ವಿರುದ್ಧ ಬ್ಯಾಟಿಂಗ್ ಆಯ್ದುಕೊಂಡ ಭಾರತ

Published 12 ಸೆಪ್ಟೆಂಬರ್ 2023, 9:18 IST
Last Updated 12 ಸೆಪ್ಟೆಂಬರ್ 2023, 9:18 IST
ಅಕ್ಷರ ಗಾತ್ರ

ಕೊಲಂಬೊ: ಏಷ್ಯಾ ಕಪ್‌ ಏಕದಿನ ಕ್ರಿಕೆಟ್‌ ಟೂರ್ನಿಯ ಸೂಪರ್‌ ಫೋರ್‌ ಹಂತದ ನಾಲ್ಕನೇ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಿವೆ. ಟಾಸ್‌ ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡಿದೆ.

ಇಲ್ಲಿನ ಆರ್‌.ಪ್ರೇಮದಾಸ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಭಾರತ ತಂಡ ಸತತ ಮೂರನೇ ದಿನ ಕಣಕ್ಕಿಳಿಯುತ್ತಿದೆ.

ಪಾಕಿಸ್ತಾನ ವಿರುದ್ಧ ಭಾನುವಾರ ನಡೆಯಬೇಕಿದ್ದ ಪಂದ್ಯ ಮಳೆಯಿಂದ ಅರ್ಧದಲ್ಲೇ ನಿಂತಿತ್ತು. ಮೀಸಲು ದಿನವಾದ ಸೋಮವಾರ ಆಟವನ್ನು ಮುಂದುವರಿಸಲಾಗಿತ್ತು. ಆ ಪಂದ್ಯವನ್ನು ರೋಹಿತ್ ಶರ್ಮಾ ಪಡೆ 228 ರನ್‌ ಅಂತರದಿಂದ ಗೆದ್ದುಕೊಂಡಿರುವ ಮತ್ತೊಂದು ಜಯದ ವಿಶ್ವಾಸದಲ್ಲಿದೆ.

ಇತ್ತ ಶ್ರೀಲಂಕಾ ತಂಡ ಸೂಪರ್‌ ಫೋರ್‌ ಹಂತದ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿತ್ತು. ಲೀಗ್‌ ಹಂತದಲ್ಲಿ ಎರಡು ಪಂದ್ಯಗಳನ್ನು ಗೆದ್ದುಕೊಂಡಿದ್ದ ಆತಿಥೇಯ ತಂಡ ಟೂರ್ನಿಯಲ್ಲಿ ಅಜೇಯವಾಗಿ ಉಳಿದುಕೊಂಡಿದೆ. ಹೀಗಾಗಿ ಪಂದ್ಯ ಕುತೂಹಲ ಕೆರಳಿಸಿದೆ.

ಆಡುವ ಹನ್ನೊಂದರ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್‌ಪ್ರೀತ್ ಬೂಮ್ರಾ, 

ಶ್ರೀಲಂಕಾ: ದಾಸುನ್ ಶನಕ (ನಾಯಕ), ಪಾಥುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಶಾಲ್ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ ಅಸಲಂಕ, ಧನಂಜಯ ಡಿ ಸಿಲ್ವಾ, ದುನಿತ್‌ ವೆಲ್ಲಲಗೆ, ಮಹೀಷ್ ತೀಕ್ಷಣ, ಕಾಸುನ್ ರಜಿತಾ, ಮಥೀಷ ಪಥಿರಾಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT