ಬುಧವಾರ, ಸೆಪ್ಟೆಂಬರ್ 29, 2021
21 °C

IND vs SL T20: ಶ್ರೀಲಂಕಾ ಗೆಲುವಿಗೆ 165 ರನ್‌ ಗುರಿ ನೀಡಿದ ಭಾರತ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಕೊಲೊಂಬೊ: ಶ್ರೀಲಂಕಾ ವಿರುದ್ಧದ ಮೊದಲ ಟ್ವಿ–20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಲ್ಲಿ 164 ರನ್‌ ಗಳಿಸಿದೆ.

ಕೊಲೊಂಬೊ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು.

ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ ರನ್‌ ಖಾತೆ ತೆರೆಯುವ ಮುನ್ನವೇ ಧುಷ್ಯಂತ್ ಚಾಮೀರಾಗೆ ಔಟ್‌ ಆಗಿದ್ದಾರೆ.

ಬಳಿಕ, ನಾಯಕ ಶಿಖರ್ ಧವನ್‌ ಜೊತೆಗೂಡಿದ ಸಂಜು ಸ್ಯಾಮ್ಸನ್ 27 ರನ್‌ ಗಳಿಸಿ ವಾನಿದು ಹಾಸರಂಗಾಗೆ ವಿಕೆಟ್ ಒಪ್ಪಿಸಿದ್ದಾರೆ.

ಸೂರ್ಯಕುಮಾರ್‌ ಯಾದವ್‌ 50, ಶಿಖರ್‌ ಧವನ್‌ 46 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು. ಹಾರ್ಧಿಕ್ ಪಾಂಡ್ಯ 10 ರನ್‌ ಗಳಿಸಿ ಧುಷ್ಯಂತ್ ಚಾಮೀರಾಗೆ  ವಿಕೆಟ್‌ ಒಪ್ಪಿಸಿದರು.

ಶ್ರೀಲಂಕಾ ಪರ ಧುಷ್ಯಂತ್ ಚಾಮೀರಾ 2, ವಾನಿದು ಹಾಸರಂಗಾ 2, ಚಾಮಿಕಾ ಕರುಣಾರತ್ನೆ 1 ವಿಕೆಟ್‌ ಕಬಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು