ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs WI 1st ODI | 1000ನೇ ಪಂದ್ಯ ಗೆಲ್ಲಲು ಭಾರತಕ್ಕೆ 177 ರನ್‌ಗಳ ಗುರಿ

Last Updated 6 ಫೆಬ್ರುವರಿ 2022, 11:53 IST
ಅಕ್ಷರ ಗಾತ್ರ

ಅಹಮದಾಬಾದ್:‌ಮೊಟೇರಾದ ನರೇಂದ್ರ ಮೋದಿ ಕ್ರಿಕೆಟ್ ಅಂಗಳದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದ್ದ ಭಾರತ, ಎದುರಾಳಿ ತಂಡವನ್ನು 176 (43.5)ರನ್ ಗಳಿಗೆ ಕಟ್ಟಿ ಹಾಕಿದೆ.

ಯಜುವೇಂದ್ರ ಚಹಾಲ್‌ 4 ವಿಕೆಟ್‌ ಗಳಿಸಿದರೆ, ವಾಷಿಂಗ್ಟನ್‌ ಸುಂದರ್‌ ಮೂರು ವಿಕೆಟ್‌ ಪಡೆದರು. ಗೆಲ್ಲಲು ಭಾರತಕ್ಕೆ 177ರನ್‌ಗಳ ಗುರಿ ಸಿಕ್ಕಿದೆ.ಇದು ಭಾರತ ಕ್ರಿಕೆಟ್‌ ತಂಡ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಡುತ್ತಿರುವ 1,000ನೇ ಪಂದ್ಯವಾಗಿದ್ದು, ಟೀಂ ಇಂಡಿಯಾ ಗೆಲ್ಲುವ ವಿಶ್ವಾಸದಲ್ಲಿದೆ.

ಭಾರತವು 1,000 ಏಕದಿನ ಪಂದ್ಯಗಳನ್ನಾಡಿದ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ.958 ಪಂದ್ಯಗಳನ್ನು ಆಡಿರುವ ಆಸ್ಟ್ರೇಲಿಯಾ ಮತ್ತು 936 ಪಂದ್ಯವನ್ನಾಡಿರುವ ಪಾಕಿಸ್ತಾನ ಹೆಚ್ಚು ಏಕದಿನ ಪಂದ್ಯಗಳನ್ನಾಡಿದ ರಾಷ್ಟ್ರಗಳ ಪಟ್ಟಿಯಲ್ಲಿ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ. ಈ ಪಂದ್ಯವು ಭಾರತದಪಾಲಿಗೆ ಮಹತ್ವದ್ದೆನಿಸಿದೆ.

ಉಪನಾಯಕ ಹಾಗೂ ಆರಂಭಿಕ ಆಟಗಾರ ಕೆ.ಎಲ್.‌ ರಾಹುಲ್ ಈ ಪಂದ್ಯದಿಂದ ಹೊರಗುಳಿದಿದ್ದು, ನಾಯಕ ರೋಹಿತ್‌ ಶರ್ಮಾ ಜೊತೆಗೆ ಇಶಾನ್‌ ಕಿಶನ್‌ ಇನಿಂಗ್ಸ್‌ ಆರಂಭಿಸಲಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಎಂದಿನಂತೆ ತಮ್ಮ ಮೂರನೇ ಕ್ರಮಾಂಕದಲ್ಲಿ ಆಡಲಿದ್ದು, ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್‌ ಮತ್ತು ದೀಪಕ್‌ ಹೂಡಾ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್‌ ಬೀಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT