ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs WI 2nd Test: ಕೊಹ್ಲಿ, ರೋಹಿತ್, ಜೈಸ್ವಾಲ್ ಫಿಫ್ಟಿ; ಭಾರತ 288/4

Published 21 ಜುಲೈ 2023, 2:55 IST
Last Updated 21 ಜುಲೈ 2023, 2:55 IST
ಅಕ್ಷರ ಗಾತ್ರ

ಟ್ರಿನಿಡಾಡ್: ಅತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್‌‌‌ನಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಭಾರತ 84 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 288 ರನ್ ಗಳಿಸಿದೆ.

ನಾಯಕ ರೋಹಿತ್ ಶರ್ಮಾ 80, ಯಶಸ್ವಿ ಜೈಸ್ವಾಲ್ 57 ಮತ್ತು ವಿರಾಟ್ ಕೊಹ್ಲಿ ಔಟಾಗದೆ 87 ರನ್ ಗಳಿಸಿದ್ದಾರೆ.

ಇದನ್ನೂ ಓದಿ: IND vs WI: 500ನೇ ಅಂತರರಾಷ್ಟ್ರೀಯ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮತ್ತೊಂದು ಸಾಧನೆ

ಟಾಸ್ ಗೆದ್ದ ವೆಸ್ಟ್‌ಇಂಡೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಭಾರತದ ಪರ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಜೋಡಿ ಸತತ ಎರಡನೇ ಬಾರಿಗೆ ಶತಕದ ಜೊತೆಯಾಟದಲ್ಲಿ ಭಾಗಿಯಾಯಿತು.

143 ಎಸೆತಗಳನ್ನು ಎದುರಿಸಿದ ರೋಹಿತ್ ಒಂಬತ್ತು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 80 ರನ್ ಗಳಿಸಿದರು.

ಅತ್ತ ಎರಡನೇ ಟೆಸ್ಟ್ ಪಂದ್ಯ ಆಡುತ್ತಿರುವ ಜೈಸ್ವಾಲ್ ಆಕರ್ಷಕ ಅರ್ಧಶತಕ (57 ರನ್, 74 ಎಸೆತ, 9 ಬೌಂಡರಿ, 1 ಸಿಕ್ಸರ್) ಗಳಿಸಿದರು. ಪ್ರಥಮ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಜೈಸ್ವಾಲ್ ಚೊಚ್ಚಲ ಶತಕ ಗಳಿಸಿದ್ದರು.

ಈ ನಡುವೆ ಶುಭಮನ್ ಗಿಲ್ (10) ಹಾಗೂ ಅಜಿಂಕ್ಯ ರಹಾನೆ (8) ವೈಫಲ್ಯ ಅನುಭವಿಸಿದರು.

ಶತಕದತ್ತ ಕೊಹ್ಲಿ...

500ನೇ ಅಂತರರಾಷ್ಟ್ರೀಯ ಪಂದ್ಯ ಆಡುತ್ತಿರುವ ವಿರಾಟ್ ಕೊಹ್ಲಿ 87 ರನ್ ಗಳಿಸಿ ಔಟಾಗದೆ ಉಳಿದಿದ್ದಾರೆ. ಅಲ್ಲದೆ ಶತಕದತ್ತ ದಾಪುಗಾಲು ಇಟ್ಟಿದ್ದಾರೆ.

ರವೀಂದ್ರ ಜಡೇಜ (ಅಜೇಯ 36) ಅವರೊಂದಿಗೆ ಮುರಿಯದ ಐದನೇ ವಿಕೆಟ್‌ಗೆ 106 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾಗಿದ್ದಾರೆ.

161 ಎಸೆತಗಳನ್ನು ಎದುರಿಸಿದ ಕೊಹ್ಲಿ ಎಂಟು ಬೌಂಡರಿಗಳ ನೆರವಿನಿಂದ ಅಜೇಯ 87 ರನ್ ಗಳಿಸಿದ್ದಾರೆ. ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ (25,548 ರನ್) ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT