ಬುಧವಾರ, ಅಕ್ಟೋಬರ್ 5, 2022
28 °C

IND vs ZIM 1st ODI: ಭಾರತಕ್ಕೆ 190 ರನ್ ಗುರಿ ನೀಡಿದ ಜಿಂಬಾಬ್ವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹರಾರೆ: ಇಲ್ಲಿ ನಡೆಯುತ್ತಿರುವ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಜಿಂಬಾಬ್ವೆ, ಭಾರತಕ್ಕೆ 190 ರನ್‌ಗಳ ಗುರಿ ನೀಡಿದೆ..

ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಜಿಂಬಾಬ್ವೆ 40.3 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 189 ರನ್ ಗಳಿಸಿತು.

ರೆಗಿಸ್ ಚಕಬ್ವಾ 35, ರಿಚರ್ಡ್ ಗರವಾ 34 ಮತ್ತು ಬ್ರಾಡ್ ಎವನ್ಸ್ 33 ರನ್ ಗಳಿಸಿದರು.

ಭಾರತದ ಪರ ದೀಪಕ್ ಚಾಹರ್, ಪ್ರಸಿದ್ಧ ಕೃಷ್ಣ ಮತ್ತು ಅಕ್ಷರ್ ಪಟೇಲ್ ತಲಾ 3 ವಿಕೆಟ್ ಉರುಳಿಸಿದರು.

ಭಾರತೀಯ ಬೌಲರ್‌ಗಳ ಬೌಲಿಂಗ್ ದಾಳಿಗೆ ತತ್ತರಿಸಿದ ಜಿಂಬಾಬ್ವೆ ತಂಡ ಅಲ್ಪ ಮೊತ್ತಕ್ಕೆ ಕುಸಿಯಿತು.

ಭಾರತ ಬ್ಯಾಟಿಂಗ್ ಆರಂಭಿಸಿದ್ದು, ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು