ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ ನೆಲದಲ್ಲಿ ಶತಕ ಬಾರಿಸಿ ಇತಿಹಾಸ ರಚಿಸಿದ ಸ್ಮೃತಿ ಮಂದಾನ

Last Updated 1 ಅಕ್ಟೋಬರ್ 2021, 10:03 IST
ಅಕ್ಷರ ಗಾತ್ರ

ಗೋಲ್ಡ್‌ ಕೋಸ್ಟ್‌: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿರುವ ಭಾರತದ ಆಟಗಾರ್ತಿ ಸ್ಮೃತಿ ಮಂದಾನ ನೂತನ ದಾಖಲೆ ಬರೆದಿದ್ದಾರೆ.

ಆಸ್ಟ್ರೇಲಿಯಾ ನೆಲದಲ್ಲಿ ಮಹಿಳಾ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಭಾರತದ ಮೊಟ್ಟ ಮೊದಲಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಇದು ಕ್ರಿಕೆಟ್‌ನ ದೀರ್ಘ ಮಾದರಿಯಲ್ಲಿ ಮಂದಾನ ಬ್ಯಾಟ್‌ನಿಂದ ದಾಖಲಾದ ಚೊಚ್ಚಲ ಶತಕವೂ ಹೌದು.

ಮಳೆ ಅಡ್ಡಿಯಾದ ಪಂದ್ಯದಲ್ಲಿ ತಾಜಾ ವರದಿಗಳ ವೇಳೆಗೆ ಭಾರತ ಎರಡನೇ ದಿನದಾಟದಲ್ಲಿ 101.5 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 276 ರನ್ ಗಳಿಸಿದೆ.

ಆಕರ್ಷಕ ಇನ್ನಿಂಗ್ಸ್ ಕಟ್ಟಿದ ಸ್ಮೃತಿ 216 ಎಸೆತಗಳಲ್ಲಿ 127 ರನ್ ಗಳಿಸಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 22 ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿದ್ದವು. ಅಲ್ಲದೆ ಮೊದಲ ವಿಕೆಟ್‌ಗೆ ಶಫಾಲಿ ವರ್ಮಾ ಜೊತೆಗೆ 93 ರನ್‌ಗಳ ಜೊತೆಯಾಟ ನೀಡಿದರು.

ಸ್ಮೃತಿ ಮಂದಾನ ಸಾಧನೆಗೆ ಕ್ರಿಕೆಟ್‌ ಲೋಕದಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT