ಗುವಾಹಟಿ: ಅಫ್ಗಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಭಾರತ ತಂಡವನ್ನು ಆಯ್ಕೆ ಮಾಡಿದೆ.

ಐಪಿಎಲ್ನಲ್ಲಿ ಕಳಪೆ ಪದರ್ಶನ ನೀಡುತ್ತಿರುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರನ್ನು ಟೆಸ್ಟ್ ತಂಡದ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ್ದು, ಉತ್ತಮ ಲಯದಲ್ಲಿರುವ ಕೆ.ಎಲ್.ರಾಹುಲ್ ಅವರಿಗೆ ಆ ಜವಾಬ್ದಾರಿ ನೀಡಲಾಗಿದೆ. ಶುಭಮನ್ ಗಿಲ್ ನಾಯಕರಾಗಿ ಮುಂದುವರಿದಿದ್ದಾರೆ.

ಅಫ್ಗಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವು ಜುಲೈ 6ರಂದು ಮುಲ್ಲನಪುರದಲ್ಲಿ ನಡೆಯಲಿದ್ದು, ಸ್ಪಿನ್ ಬೌಲರ್ ಮಾನವ್ ಸುತಾರ್ ಮತ್ತು ವೇಗಿ ಗುರ್ನೂರ್ ಬ್ರಾರ್ ಅವರಿಗೆ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇವರಿಬ್ಬರೂ ಐಪಿಎಲ್ನಲ್ಲಿ ಗುಜರಾತ್ ಟೈಟನ್ಸ್ ಪರ ಆಡುತ್ತಿದ್ದಾರೆ. ಹಿರಿಯ ಆಟಗಾರ ರವೀಂದ್ರ ಜಡೇಜ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕನ್ನಡಿಗ ದೇವದತ್ತ ಪಡಿಕ್ಕಲ್, ಪ್ರಸಿದ್ಧ ಕೃಷ್ಣ ಕೂಡ ಸ್ಥಾನ ಪಡೆದಿದ್ದಾರೆ.

ಜೂನ್ 14ರಿಂದ ಅಫ್ಗಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಇಶಾನ್ ಕಿಶನ್, ಪ್ರಿನ್ಸ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದು, ಪಂತ್ ಅವರನ್ನು ಕೈಬಿಡಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಧರ್ಮಶಾಲಾ, ಲಖನೌ ಮತ್ತು ಚೆನ್ನೈನಲ್ಲಿ ಏಕದಿನ ಪಂದ್ಯಗಳು ಜರುಗಲಿವೆ.

ಟೆಸ್ಟ್ ತಂಡ: ಶುಭಮನ್ ಗಿಲ್(ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್ ರಾಹುಲ್(ಉಪ ನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್(ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ದೇವದತ್ತ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಹರ್ಷ್ ದುಬೆ

ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್(ಉಪ ನಾಯಕ), ಕೆ.ಎಲ್ ರಾಹುಲ್(ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.