ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಟಿ20 ವಿಶ್ವಕಪ್: ಎ ಗುಂಪಿನಲ್ಲಿ ಭಾರತ

Published 5 ಮೇ 2024, 14:39 IST
Last Updated 5 ಮೇ 2024, 14:39 IST
ಅಕ್ಷರ ಗಾತ್ರ

ದುಬೈ: ಭಾರತ ಮಹಿಳಾ ಕ್ರಿಕೆಟ್ ತಂಡವು ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎ ಗುಂಪಿನಲ್ಲಿ ಆಡಲಿದೆ.

ಇದೇ ಗುಂಪಿನಲ್ಲಿ  ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ವನಿತೆಯರ ತಂಡಗಳು ಕೂಡ ಕಣಕ್ಕಿಳಿಯಲಿವೆ. 

ಬಾಂಗ್ಲಾದೇಶದಲ್ಲಿ ಅಕ್ಟೋಬರ್  3 ರಿಂದ 20ರವರೆಗೆ ವಿಶ್ವಕಪ್ ಟೂರ್ನಿ ನಡೆಯಲಿದೆ. ಸಿಲೆಟ್‌ನಲ್ಲಿ ನಡೆಯುವ ಅಕ್ಟೋಬರ್ 4ರಂದು ನಡೆಯುವ ಮೊದಲ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ಎದುರು ಆಡಲಿದೆ. ಅ. 6ರಂದು ಪಾಕಿಸ್ತಾನ ಎದುರು ಆಡಲಿದೆ.  13ರಂದು ಆಸ್ಟ್ರೇಲಿಯಾವನ್ನು ಎದುರಿಸಲಿದೆ. 

‘ಎರಡು ಗುಂಪುಗಳಲ್ಲಿ ತಂಡಗಳನ್ನು ವಿಭಜಿಸಲಾಗಿದೆ.  ಅಗ್ರ ಎರಡು ತಂಡಗಳು ಸೆಮಿಫೈನಲ್ ಪ್ರವೇಶಿಸುತ್ತವೆ. ಅ. 17 ಮತ್ತು18ರಂದು ನಾಲ್ಕರ ಘಟ್ಟದ ಪಂದ್ಯಗಳು ನಡೆಯುತ್ತವೆ. ಢಾಕಾದಲ್ಲಿ ಅ. 20ರಂದು ಫೈನಲ್ ನಡೆಯಲಿದೆ’ ಎಂದು ಐಸಿಸಿಯು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. 

‘19 ದಿನಗಳವರೆಗೆ ಆಯೋಜಿಸಲಾಗಿರುವ ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳು ನಡೆಯಲಿವೆ. ಢಾಕಾ, ಸಿಲೆಟ್‌ಗಳಲ್ಲಿ ಪಂದ್ಯಗಳಿವೆ. ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮೀಸಲು ದಿನಗಳನ್ನೂ ನಿಗದಿಪಡಿಸಲಾಗಿದೆ’ ಎಂದು ಐಸಿಸಿ ತಿಳಿಸಿದೆ. 

ಆತಿಥೇಯ ಬಾಂಗ್ಲಾದೇಶ ತಂಡವು ಬಿ ಗುಂಪಿನಲ್ಲಿ ಆಡಲಿದೆ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳೊಂದಿಗೆ ಪೈಪೋಟಿ ನಡೆಸಲಿದೆ. ಕ್ವಾಲಿಫೈಯಿಂಗ್‌ ಸುತ್ತಿನಿಂದ ಎರಡು ತಂಡಗಳು ಅರ್ಹತೆ ಪಡೆಯಲಿವೆ. ಅದರಲ್ಲಿ ಐರ್ಲೆಂಡ್, ಯುನೈಟೆಡ್ ಅರಬ್ ಎಮಿರೇಟ್ಸ್, ಶ್ರೀಲಂಕಾ ಮತ್ತು ಸ್ಕಾಟ್ಲೆಂಡ್ ತಂಡಗಳು ಸ್ಪರ್ಧೆಯಲ್ಲಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT