ಏಕದಿನ ಕ್ರಿಕೆಟ್‌: ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

7

ಏಕದಿನ ಕ್ರಿಕೆಟ್‌: ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

Published:
Updated:

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. 

 ಟೆಸ್ಟ್ ಸರಣಿಯನ್ನು ಗೆದ್ದು ದಾಖಲೆ ನಿರ್ಮಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಈಗ ಏಕದಿನ ಕ್ರಿಕೆಟ್‌ನ ಸವಾಲು ಎದುರಾಗಿದೆ. ಈ ಏಕದಿನ ಸರಣಿ  ವಿಶ್ವಕಪ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಉಭಯ ತಂಡಗಳಿಗೂ ಮಹತ್ವದ್ದು.

ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್‌.ರಾಹುಲ್ ಅವರ ಅಕ್ಷೇಪಾರ್ಹ ಹೇಳಿಕೆಯಿಂದಾಗಿ ಇವರಿಬ್ಬರನ್ನೂ ಬಿಸಿಸಿಐ ಅಮಾನತು ಮಾಡಿದೆ. ರಾಹುಲ್ ಇತ್ತೀಚೆಗೆ ಫಾರ್ಮ್‌ನಲ್ಲಿಲ್ಲ. ಆದರೆ ಪಾಂಡ್ಯ ಅನುಪಸ್ಥಿತಿ ತಂಡದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಜಸ್‌ಪ್ರೀತ್ ಬೂಮ್ರಾ ಅವರಿಗೆ ಈಗಾಗಲೇ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಭುವನೇಶ್ವರ್ ಕುಮಾರ್ ಜೊತೆ ಮೊಹಮ್ಮದ್ ಶಮಿ ಮತ್ತು ಖಲೀಲ್ ಅಹಮ್ಮದ್ ಅವರನ್ನು ಕಣಕ್ಕೆ ಇಳಿಸಿದ್ದಾರೆ. ಸ್ಪಿನ್‌ಗೂ ಅನುಕೂಲಕರ ವಾತಾವರಣ ಇರುವುದರಿಂದ ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಅವರಿಗೆ ಅವಕಾಶ ನೀಡಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಶಿಖರ್ ಧವನ್‌, ರೋಹಿತ್ ಶರ್ಮಾ, ಅಂಬಟಿರಾಯಡು ಮತ್ತು ದೋನಿ ತಂಡಕ್ಕೆ ಬಲ ನೀಡಲಿದ್ದಾರೆ. ಕೇದಾರ್ ಜಾದವ್ ಅವರನ್ನು ಈ ಪದ್ಯಂದಿ ಕೈಬಿಡಲಾಗಿದೆ. 

ಆಸ್ಟ್ರೇಲಿಯಾ ತಂಡದಲ್ಲಿ ಮಿಷೆಲ್ ಸ್ಟಾರ್ಕ್‌, ಪ್ಯಾಟ್ ಕಮಿನ್ಸ್ ಮತ್ತು ಜೋಶ್ ಹ್ಯಾಜಲ್‌ವುಡ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಪೀಟರ್ ಸಿಡ್ಲ್‌, ಅಲೆಕ್ಸ್ ಕ್ಯಾರಿ, ಮಾರ್ಕಸ್ ಸ್ಟೊಯಿನಿಸ್‌, ಗ್ಲೆನ್ ಮ್ಯಾಕ್ಸ್‌ವೆಲ್‌ ಅವರಿಗೆ ಅವಕಾಶ ಕಲ್ಪಿಸಲಾಗಿದೆ. 

ಪಂದ್ಯ ಆರಂಭ: ಬೆಳಿಗ್ಗೆ 7.50 (ಭಾರತೀಯ ಕಾಲಮಾನ)
ಸ್ಥಳ: ಎಸ್‌ಜಿಜಿ ಕ್ರೀಡಾಂಗಣ, ಸಿಡ್ನಿ
ನೇರ ಪ್ರಸಾರ: ಸೋನಿ ನೆಟ್‌ವರ್ಕ್‌

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !