ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಕೌಂಟರ್‌: ಇಬ್ಬರು ಬಲಿ

Last Updated 28 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ರಾಯಪುರ: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳು ಶನಿವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ ಇಬ್ಬರು ನಕ್ಸಲರು ಬಲಿಯಾಗಿದ್ದಾರೆ.

ಬುರ್ಕಪಾಲ್‌ ಪ್ರದೇಶದ ಮೆಟಗುಡಂ ಗ್ರಾಮದ ಬಳಿಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಹಲವು ಮಂದಿ ನಕ್ಸಲರು ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸ್‌ ಉಪ ಮಹಾನಿರ್ದೇಶಕ ಸುಂದರರಾಜ್‌ ಹೇಳಿದ್ದಾರೆ.

ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದಿದ್ದಾರೆ.

ನೆರೆಯ ಬಿಜಾಪುರ ಜಿಲ್ಲೆಯಲ್ಲಿ ಸ್ಥಳೀಯ ಹಾಗೂ ತೆಲಂಗಾಣ ಪೊಲೀಸರು ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಏಳು ಮಂದಿ ನಕ್ಸಲರು ಹತ್ಯೆಗೀಡಾಗಿದ್ದರು.

ಮೂವರು ನಕ್ಸಲರ ಶರಣಾಗತಿ: ಛತ್ತೀಸಗಡದ ಕೊಂಡಗಾಂವ್‌ ಜಿಲ್ಲೆಯಲ್ಲಿ ಮಹಿಳೆ ಸೇರಿದಂತೆ ಮೂವರು ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ತಲೆಗೆ ಸರ್ಕಾರ ಬಹುಮಾನ ಘೋಷಿಸಿತ್ತು.

ನಕ್ಸಲ್‌ ಬಂಧನ
ಜಮ್‌ಶೆಡ್‌ಪುರ, ಜಾರ್ಖಂಡ್‌ (ಪಿಟಿಐ): ಜನತಾ ದಳ(ಯು) ಮಾಜಿ ಶಾಸಕ ರಮೇಶ್‌ ಸಿಂಗ್‌ ಮುಂಡಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ನಕ್ಸಲ್‌ನನ್ನು ಇಲ್ಲಿನ ಪಶ್ಚಿಮ ಸಿಂಗ್‌ಭೂಮ್‌ ಜಿಲ್ಲೆಯ ಚಾಯ್‌ಬಸಾದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಶೀಲ್‌ ದಂಗಿಲ್‌ ಅಲಿಯಾಸ್‌ ಕ್ರಿಸ್‌ ಬಂಧಿತ ನಕ್ಸಲ್‌.  ಈತ ರಮೇಶ್‌ ಸಿಂಗ್‌ ಹತ್ಯೆ ಪ್ರಕರಣದ ಏಳು ಮಂದಿ ಆರೋಪಿಗಳಲ್ಲಿ ಒಬ್ಬನಾಗಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT