ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ವಾರದ ಬಳಿಕ ಸಚಿನ್‌‌ ತೆಂಡೂಲ್ಕರ್‌ ಆಸ್ಪತ್ರೆಗೆ ದಾಖಲು

Last Updated 2 ಏಪ್ರಿಲ್ 2021, 6:41 IST
ಅಕ್ಷರ ಗಾತ್ರ

ಮುಂಬೈ: ಅಭಿಮಾನಿಗಳಿಂದ 'ಕ್ರಿಕೆಟ್‌ ದೇವರು' ಎಂದೇ ಕರೆಸಿಕೊಳ್ಳುವ ಸಚಿನ್‌ ತೆಂಡೂಲ್ಕರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವಾರ ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದ ಅವರು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದರು.

ಶುಕ್ರವಾರ ಟ್ವೀಟ್‌ ಮಾಡಿರುವ ಅವರು, 'ವೈದ್ಯಕೀಯ ಸಲಹೆಯ ಮೇರೆಗೆ ಮುನ್ನೆಚ್ಚರಿಕೆಯ ಕ್ರಮವಾಗಿ, ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಇನ್ನು ಕೆಲವು ದಿನಗಳಲ್ಲೇ ಮನೆಗೆ ಹಿಂದಿರುಗುವ ವಿಶ್ವಾಸವಿದೆ. ಎಲ್ಲರೂ ಎಚ್ಚರ ವಹಿಸಿ ಮತ್ತು ಸುರಕ್ಷಿತವಾಗಿರಿ' ಎಂದಿದ್ದಾರೆ.

ಇದೇ ತಿಂಗಳು 48 ವಸಂತಗಳನ್ನು ಪೂರೈಸಲಿರುವ ಸಚಿನ್‌, ಕೋವಿಡ್‌–19 ದೃಢಪಡುತ್ತಿದ್ದಂತೆ ಮನೆಯಲ್ಲಿಯೇ ಕ್ವಾರಂಟೈನ್‌ ಆಗಿದ್ದರು. ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಸಚಿನ್,‌ 2013ರಲ್ಲಿ ವೃತ್ತಿಪರ ಕ್ರಿಕೆಟ್‌ಗೆ ವಿದಾಯ ಹೇಳಿದರು. 24 ವರ್ಷಗಳ ಅವರ ವೃತ್ತಿ ಕ್ರಿಕೆಟ್‌ನಲ್ಲಿ 100 ಅಂತರರಾಷ್ಟ್ರೀಯ ಶತಕಗಳ ದಾಖಲೆ ಮಾಡಿದ್ದಾರೆ.

ಕೋವಿಡ್‌–19 ಪ್ರಕರಣಗಳು ಹೆಚ್ಚಿರುವ ಮುಂಬೈನಲ್ಲಿ ಸಚಿನ್‌ ವಾಸಿಸುತ್ತಿದ್ದಾರೆ. ಶುಕ್ರವಾರ ಮಹಾರಾಷ್ಟ್ರದಲ್ಲಿ ಕೋವಿಡ್ ದೃಢಪಟ್ಟ 43,183 ಪ್ರಕರಣಗಳು ದಾಖಲಾಗಿದ್ದು, ಮುಂಬೈನಲ್ಲೇ 8,646 ಹೊಸ ಪ್ರಕರಣಗಳು ವರದಿಯಾಗಿವೆ. 24 ಗಂಟೆಗಳ ಅಂತರದಲ್ಲಿ ದಾಖಲಾಗಿರುವ ಅತಿ ಹೆಚ್ಚು ಪ್ರಕರಣಗಳು ಇದಾಗಿದೆ.

ಭಾರತದಲ್ಲಿ ಶುಕ್ರವಾರ ಬೆಳಗ್ಗೆ 81,466 ಕೋವಿಡ್‌ ಪ್ರಕರಣಗಳು ವರದಿಯಾಗಿದೆ. ಕಳೆದ ಆರು ತಿಂಗಳ ಬಳಿಕ ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಸಂಖ್ಯೆ 80 ಸಾವಿರದ ಗಡಿ ದಾಟಿದ್ದು, ಹಲವು ರಾಜ್ಯಗಳಲ್ಲಿ ಕೊರೊನಾ ವೈರಸ್‌ ಎರಡನೇ ಅಲೆಯ ಪರಿಣಾಮ ಕಂಡು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT