ಬುಧವಾರ, ನವೆಂಬರ್ 13, 2019
21 °C

31ನೇ ವಸಂತಕ್ಕೆ ಕಾಲಿಟ್ಟ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ

Published:
Updated:

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು ಮಂಗಳವಾರ 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 

ಹುಟ್ಟುಹಬ್ಬದ ಅಂಗವಾಗಿ ಅಂತರರಾಷ್ಟ್ರೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಐಸಿಸಿ), ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ), ಹಿರಿಯ ಕ್ರಿಕೆಟಿಗರು ಸೇರಿದಂತೆ ಹಲವು ಕ್ರೀಡಾಭಿಮಾನಿಗಳು ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ.  

ಸದ್ಯ ವಿಶ್ರಾಂತಿಯಲ್ಲಿರುವ ಕೊಹ್ಲಿ, ನವೆಂಬರ್ 14ರಂದು ನಡೆಯಲಿರುವ ಬಾಂಗ್ಲಾ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯಕ್ಕೆ ತಂಡ ಸೇರಿಕೊಳ್ಳಲಿದ್ದಾರೆ. 

ಕೊಹ್ಲಿ ಅನುಪಸ್ಥಿತಿ ಟಿ–20 ಸರಣಿಯಲ್ಲಿ ರೋಹಿತ್‌ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ. 

ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 20 ಸಾವಿರ ರನ್‌ ಗಳಿಕೆ, ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ದ್ವಿಶತಕ ಗಳಿಸಿದ ಆಟಗಾರ ಎಂಬ ದಾಖಲೆ ಕೊಹ್ಲಿ ಹೆಸರಲ್ಲಿದೆ.  

ಪ್ರತಿಕ್ರಿಯಿಸಿ (+)