ಬುಧವಾರ, ಅಕ್ಟೋಬರ್ 21, 2020
23 °C

ಐಸಿಸಿ ಟಿ20 ರ‍್ಯಾಂಕಿಂಗ್: ಭಾರತದ ವನಿತೆಯರಿಗೆ ಮೂರನೇ ಸ್ಥಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಭಾರತ ಮಹಿಳಾ ಕ್ರಿಕೆಟ್ ತಂಡವು ಐಸಿಸಿ ಟ್ವೆಂಟಿ–20 ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೇರಿದೆ.

ಈ ಹಾದಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಹಿಂದಿಕ್ಕಿರುವ ಭಾರತದ ವನಿತೆಯರು, ಏಕದಿನ ಕ್ರಿಕೆಟ್‌ನಲ್ಲಿ ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಟಿ20 ವಿಭಾಗದಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನದಲ್ಲಿವೆ. ಭಾರತ 270 ಮತ್ತು ನ್ಯೂಜಿಲೆಂಡ್ 269 ಅಂಕಗಳನ್ನು ಗಳಿಸಿವೆ. ಭಾರತ ತಂಡವು ಈ ಬಾರಿಯ ಟ್ವೆಂಟಿ–20 ವಿಶ್ವಕಪ್ ಟೂರ್ನಿಯ ಫೈನಲ್ ತಲುಪಿತ್ತು.

ಈ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಬ್ರೆಜಿಲ್ ತಂಡವು 11 ಸ್ಥಾನಗಳ ಬಡ್ತಿಯೊಂದಿಗೆ 27ನೇ ಸ್ಥಾನಕ್ಕೆ ಬಂದಿದೆ. ಆದರೆ ಮಲೇಷ್ಯಾ  38ನೇ ಸ್ಥಾನಕ್ಕೆ ಕುಸಿದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು