ಭಾರತಕ್ಕೆ ವಿಶ್ವಕಪ್‌ ಗೆಲ್ಲುವ ಅವಕಾಶವಿದೆ: ವೆಂಗ್‌ಸರ್ಕಾರ್‌

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಭಾರತಕ್ಕೆ ವಿಶ್ವಕಪ್‌ ಗೆಲ್ಲುವ ಅವಕಾಶವಿದೆ: ವೆಂಗ್‌ಸರ್ಕಾರ್‌

Published:
Updated:
Prajavani

ಮುಂಬೈ: ವಿರಾಟ್‌ ಕೊಹ್ಲಿ ಪಡೆಗೆ ಈ ಬಾರಿಯ ವಿಶ್ವಕಪ್‌ ಎತ್ತಿಹಿಡಿಯುವ ಅದ್ಭುತ ಅವಕಾಶವಿದೆ ಎಂದು ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ದಿಲೀಪ್‌ ವೆಂಗ್‌ಸರ್ಕಾರ್‌ ಅಭಿಪ್ರಾಯಪಟ್ಟಿದ್ದಾರೆ.

ಮುಂಬೈ ಕ್ರಿಕೆಟ್‌ ಸಂಸ್ಥೆಯ ಸಂಘಟಕರು ಮುಂಬೈ ಟ್ವೆಂಟಿ–20 ಲೀಗ್‌ನ ಎರಡನೇ ಆವೃತ್ತಿಯ ಆರಂಭವನ್ನು ಘೋಷಿಸಿದರು. ಲೀಗ್‌ನ ಮಾರ್ಗದರ್ಶಿ ಆಗಿರುವ ವೆಂಗ್‌ಸರ್ಕಾರ್‌ ಈ ಸಂದರ್ಭದಲ್ಲಿ ಮಾತನಾಡಿದರು.

 ಭಾರತ ಕನಿಷ್ಠ ಸೆಮಿಫೈನಲ್‌ಗಾದರೂ ಖಂಡಿತ ತಲುಪಲಿದೆ. ತಂಡ ಫೈನಲ್‌ವರೆಗೆ ಸಾಗಲಿದೆ ಎಂಬುದನ್ನು ನಿಖರವಾಗಿ ಹೇಳಲಾಗದು. ಕೊಹ್ಲಿ ಪಡೆ ಭಾರೀ ಸಾಮರ್ಥ್ಯವನ್ನು ಹೊಂದಿದ್ದು, ಎಲ್ಲ ಆಟಗಾರರು ಉತ್ತಮ ಲಯದಲ್ಲಿದ್ದಾರೆ ಎಂದು ವೆಂಗ್‌ಸರ್ಕಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಇಂಗ್ಲೆಂಡ್‌ನಲ್ಲಿ ಮೇ 30ರಿಂದ ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ. ಭಾರತ ಜೂ.5ರಂದು ದ.ಆಫ್ರಿಕಾ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !