ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

WTC ಫೈನಲ್: 72 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡ ಆಸ್ಟ್ರೇಲಿಯಾ

Published 7 ಜೂನ್ 2023, 9:32 IST
Last Updated 7 ಜೂನ್ 2023, 9:32 IST
ಅಕ್ಷರ ಗಾತ್ರ

ಲಂಡನ್: ವಿಶ್ವ ಟೆಸ್ಟ್ ಕ್ರಿಕೆಟ್‌ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ  67 ರನ್‌ಗಳಿಗೆ 1 ವಿಕೆಟ್‌ ಕಳೆದುಕೊಂಡಿದೆ.

ಆಸ್ಟ್ರೇಲಿಯಾ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಆಸ್ಟ್ರೇಲಿಯಾದ ಉಸ್ಮಾನ್‌ ಖ್ವಾಜಾ ಹಾಗೂ ವಾರ್ನರ್‌ ಅವರ ವಿಕೆಟ್‌ ಕಳೆದಕೊಂಡಿತು. ಭಾರತದ ಪರ ಸಿರಾಜ್‌ ಹಾಗೂ ಠಾಕೂರ್‌ ತಲಾ ಒಂದು ವಿಕೆಟ್‌ ಪಡೆದರು.

ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳು ಇದೇ ಮೊದಲ ಬಾರಿಗೆ ತಟಸ್ಥ ತಾಣದಲ್ಲಿ ಟೆಸ್ಟ್ ಪಂದ್ಯ ಆಡುತ್ತಿವೆ.

ಇಂದಿನಿಂದ ಆರಂಭವಾಗಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ (ಡಬ್ಲ್ಯುಟಿಸಿ)ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ವೇಗಿ ಪ್ಯಾಟ್ ಕಮಿನ್ಸ್‌ ನೇತೃತ್ವದ ಆಸ್ಟ್ರೇಲಿಯಾ ತಂಡಗಳು ಸಮಬಲದ ಹಣಾಹಣಿ ನಡೆಸುವ ನಿರೀಕ್ಷೆ ಇದೆ.

ಭಾರತವು ಕಳೆದ ಒಂದು ದಶಕದಿಂದ ಐಸಿಸಿ ಟ್ರೋಫಿ ಗೆಲುವಿನ ಬರ ಎದುರಿಸುತ್ತಿದೆ. 2013ರಲ್ಲಿ ಇಂಗ್ಲೆಂಡ್‌ನಲ್ಲಿ ಮಹೇಂದ್ರಸಿಂಗ್ ಧೋನಿ ಬಳಗವು ಚಾಂಪಿಯನ್ಸ್‌ ಟ್ರೋಫಿ ಗೆದ್ದಿತ್ತು. ಅದರ ನಂತರ ಮೂರು ಬಾರಿ ನಿಗದಿತ ಓವರ್‌ಗಳ ಮಾದರಿಯ ವಿಶ್ವಕಪ್ ಟೂರ್ನಿಗಳ ಫೈನಲ್‌ಗಳಲ್ಲಿ ಸೋತಿದೆ. 

ಇನ್ನೂ ನಾಲ್ಕು ಟೂರ್ನಿಗಳ ಸೆಮಿಫೈನಲ್‌ಗಳಲ್ಲಿ ಮಣಿದಿತ್ತು. 2021ರ ಟಿ20 ವಿಶ್ವಕಪ್ ಟೂರ್ನಿಯ ಪ್ರಾಥಮಿಕ ಸುತ್ತಿನಲ್ಲಿಯೇ ಹೊರಬಿದ್ದಿತ್ತು

WTC ಫೈನಲ್: 72 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡ ಆಸ್ಟ್ರೇಲಿಯಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT