ಮಂಗಳವಾರ, ಏಪ್ರಿಲ್ 20, 2021
32 °C
ಎರಡನೇ ಸ್ಥಾನಕ್ಕೆ ಲಗ್ಗೆ

ಟಿ20 ರ‍್ಯಾಂಕಿಂಗ್: ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ ಪಡೆ

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಭಾರತ ಕ್ರಿಕೆಟ್‌ ತಂಡವು ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ಐಸಿಸಿ ಟ್ವೆಂಟಿ–20 ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೇರಿದೆ. ಇಂಗ್ಲೆಂಡ್ ಅಗ್ರಸ್ಥಾನದಲ್ಲಿ ಮುಂದುವರಿದಿದೆ.

ವಿರಾಟ್‌ ಕೊಹ್ಲಿ ನೇತೃತ್ವದ ಭಾರತ (268) ತಂಡ ಇಂಗ್ಲೆಂಡ್‌ಗಿಂತ  ಏಳು ರೇಟಿಂಗ್‌ ಪಾಯಿಂಟ್ಸ್ ಹಿಂದಿದೆ. ಇಂಗ್ಲೆಂಡ್ 275 ಪಾಯಿಂಟ್ಸ್ ಕಲೆಹಾಕಿದೆ. ನ್ಯೂಜಿಲೆಂಡ್‌ ವಿರುದ್ಧ ಇತ್ತೀಚೆಗೆ ನಡೆದ ಐದು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ ಸೋಲು ಅನುಭವಿಸಿದ್ದರಿಂದ ಆ ತಂಡದ ಕ್ರಮಾಂಕ ಕುಸಿದಿದೆ. ಸದ್ಯ ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ಒಂದು ಪಾಯಿಂಟ್‌ನ ಅಂತರವಿದೆ.

ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ಭಾರತದ ಆಟಗಾರ, ಕನ್ನಡಿಗ ಕೆ.ಎಲ್‌.ರಾಹುಲ್ (816 ರೇಟಿಂಗ್ ಪಾಯಿಂಟ್ಸ್) ಒಂದು ಸ್ಥಾನ ಕೆಳಗಿಳಿದಿದ್ದು, ಮೂರನೇ ಸ್ಥಾನದಲ್ಲಿದ್ದಾರೆ. ವಿರಾಟ್‌ ಕೊಹ್ಲಿ (697) ಆರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇಂಗ್ಲೆಂಡ್‌ನ ಡೇವಿಡ್‌ ಮಲಾನ್‌ (915) ಹಾಗೂ ಆಸ್ಟ್ರೇಲಿಯಾದ ಆ್ಯರನ್ ಫಿಂಚ್‌ (830) ಈ ವಿಭಾಗದಲ್ಲಿ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿರುವವರು.

ನ್ಯೂಜಿಲೆಂಡ್‌ ವಿರುದ್ಧದ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ ಹಿನ್ನೆಲೆಯಲ್ಲಿ ಫಿಂಚ್ ಸ್ಥಾನದಲ್ಲಿ ಏರಿಕೆಯಾಗಿದೆ. ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್‌ ಎಂಟನೇ ಸ್ಥಾನಕ್ಕೇರಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು