ಸಿಡ್ನಿ: ಮಂಗಳವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ (ಎಸ್‌ಸಿಜಿ) ಪ್ರವಾಸಿ ಭಾರತ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿರುವ ಆತಿಥೇಯ ಆಸ್ಟ್ರೇಲಿಯಾ, ವಿಕೆಟ್ ಕೀಪರ್ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಮ್ಯಾಥ್ಯೂ ವೇಡ್ (80) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (54) ಬಿರುಸಿನ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 186 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ.

ಆಗಲೇ ಸರಣಿ ಸೋತಿರುವ ಆಸ್ಟ್ರೇಲಿಯಾಕ್ಕೆ ನಾಯಕ ಆ್ಯರನ್ ಫಿಂಚ್ ಪುನರಾಗಮನವು ಹೆಚ್ಚಿನ ಲಾಭವನ್ನುಂಟು ಮಾಡಲಿಲ್ಲ. ವಾಷಿಂಗ್ಟನ್ ಸುಂದರ್ ದಾಳಿಯಲ್ಲಿ ಶೂನ್ಯದ ಸುರುಳಿ ಸುತ್ತಿದ ಫಿಂಚ್ ನಿರಾಸೆ ಮೂಡಿಸಿದರು. ಇನ್ನೊಂದೆಡೆ ಸ್ಟೀವನ್ ಸ್ಮಿತ್ ಜೊತೆಗೂಡಿದ ವಿಕೆಟ್ ಕೀಪರ್ ಆರಂಭಿಕ ಬ್ಯಾಟ್ಸ್‌ಮನ್ ಮ್ಯಾಥ್ಯೂ ವೇಡ್ ತಂಡದ ರನ್ ಗತಿಗೆ ಆವೇಗ ತುಂಬಿದರು. ಪರಿಣಾಮ ಪವರ್ ಪ್ಲೇನಲ್ಲಿ 51 ರನ್‌ಗಳು ಹರಿದು ಬಂದವು.

ಈ ಸಂದರ್ಭದಲ್ಲಿ ಸ್ಟೀವನ್ ಸ್ಮಿತ್ ಹೊರದಬ್ಬಿದ ವಾಷಿಂಗ್ಟನ್ ಸುಂದರ್ ಆಸೀಸ್ ಓಟಕ್ಕೆ ಕಡಿವಾಣ ಹಾಕಿದರು. 23 ಎಸೆತಗಳನ್ನು ಎದುರಿಸಿದ ಸ್ಮಿತ್ ಬೌಂಡರಿ ನೆರವಿನಿಂದ 24 ರನ್ ಗಳಿಸಿದರು. ಇನ್ನೊಂದೆಡೆ ಭಾರತೀಯ ಬೌಲರ್‌ಗಳನ್ನು ದಂಡಿಸುತ್ತಾ ಸಾಗಿದ ವೇಡ್, 34 ಎಸೆತಗಳಲ್ಲಿ ಸತತ ಎರಡನೇ ಫಿಫ್ಟಿ ಬಾರಿಸಿದರು. ಅವರು ಕಳೆದ ಪಂದ್ಯದಲ್ಲಿ 25 ಎಸೆತಗಳಲ್ಲಿ ಫಿಫ್ಟಿ ಗೆರೆ ದಾಟಿದ್ದರು.

ಫಿಫ್ಟಿ ಬಳಿಕ ವೇಡ್ ಮತ್ತಷ್ಟು ಬಿರುಸಿನ ಆಟವನ್ನು ಪ್ರದರ್ಶಿಸಿದರು. ಇವರಿಗೆ ಗ್ಲೆನ್ ಮ್ಯಾಕ್‌ವೆಲ್ ಸಾಥ್ ನೀಡಿದರು. ಈ ಮಧ್ಯೆ ಮ್ಯಾಕ್ಸ್‌ವೆಲ್ ವಿಕೆಟ್ ಪಡೆದರೂ ನೋ ಬಾಲ್‌ನಿಂದಾಗಿ ಯಜುವೇಂದ್ರ ಚಹಲ್ ನಿರಾಸೆ ಅನುಭವಿಸಿದರು. 15 ಓವರ್‌ಗಳ ಅಂತ್ಯಕ್ಕೆ ಆಸೀಸ್ ಎರಡು ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿ ಸುಸ್ಥಿತಿಯಲ್ಲಿತ್ತು.

ತಮಗೆ ಸಿಕ್ಕ ಜೀವದಾನವನ್ನು ಸಮರ್ಥವಾಗಿ ಬಳಸಿದ ಮ್ಯಾಕ್ಸ್‌ವೆಲ್ 31 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಭಾರತೀಯ ಮೂಲದಲ್ಲಿ ಆತಂಕ ಮೂಡಿಸಿದರು. ಕೊನೆಗೂ ಶತಕದತ್ತ ಮುನ್ನುಗ್ಗುತ್ತಿದ್ದ ವೇಡ್ ಅವರನ್ನು ಎಲ್‌ಬಿಡಬ್ಲ್ಯು ಬಲೆಗೆ ಬೀಳಿಸಲು ಶಾರ್ದೂಲ್ ಠಾಕೂರ್ ಯಶಸ್ವಿಯಾದರು. 53 ಎಸೆತಗಳನ್ನು ಎದುರಿಸಿದ ವೇಡ್ ಏಳು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳಿಂದ 80 ರನ್ ಗಳಿಸಿದರು.

ಕೊನೆಯ ಓವರ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಕ್ಲೀನ್ ಬೌಲ್ಡ್ ಮಾಡಿದ ತಂಗರಸು ನಟರಾಜನ್, ಮಗದೊಮ್ಮೆ ಪ್ರಭಾವಿ ಎನಿಸಿಕೊಂಡರು. ಅಂತಿಮವಾಗಿ ಆಸೀಸ್ ತಂಡವು ಐದು ವಿಕೆಟ್ ನಷ್ಟಕ್ಕೆ 186 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತ್ತು. 36 ಎಸೆತಗಳನ್ನು ಎದುರಿಸಿದ ಮ್ಯಾಕ್ಸ್‌ವೆಲ್ ತಲಾ ಮೂರು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 54 ರನ್ ಗಳಿಸಿದರು.

ಇನ್ನುಳಿದಂತೆ ಡಾರ್ಸಿ ಶಾರ್ಟ್ (7), ಮೊಯಿಸೆಸ್ ಹೆನ್ರಿಕ್ಸ್ (5*) ಹಾಗೂ ಡ್ಯಾನಿಯಲ್ ಸ್ಯಾಮ್ಸ್ (4*) ರನ್ ಗಳಿಸಿದರು. ಭಾರತದ ಪರ ವಾಷಿಂಗ್ಟನ್ ಸುಂದರ್ ಎರಡು ಮತ್ತು ಟಿ ನಟರಾಜನ್ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ.
ಈ ಮೊದಲು ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ವಿಜೇತ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.

ಫಿಂಚ್ ಕಮ್‌ಬ್ಯಾಕ್
ಅತ್ತ ಗಾಯದಿಂದ ಚೇತರಿಸಿಕೊಂಡಿರುವ ಆಸ್ಟ್ರೇಲಿಯಾ ನಾಯಕ ಆ್ಯರನ್ ಫಿಂಚ್ ತಂಡಕ್ಕೆ ಪುನರಾಗಮನ ಮಾಡಿದ್ದರು. ಗಾಯದ ಹಿನ್ನೆಲೆಯಲ್ಲಿ ಫಿಂಚ್ ದ್ವಿತೀಯ ಪಂದ್ಯಕ್ಕೆ ಅಲಭ್ಯವಾಗಿದ್ದರು. ಇವರಿಗೆ ಮಾರ್ಕಸ್ ಸ್ಟೋಯಿನಿಸ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ.

ಈ ಮೊದಲು ಮೊದಲೆರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಮೂರು ಪಂದ್ಯಗಳ ಟಿ20 ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಈ ಮೂಲಕ ಏಕದಿನ ಸರಣಿಯಲ್ಲಿ ಎದುರಾದ ಸೋಲಿಗೆ ಸೇಡು ತೀರಿಸಿಕೊಂಡಿದೆ.

ನಂ.2 ಅವಕಾಶ
ಅಂತಿಮ ಪಂದ್ಯದಲ್ಲೂ ವಿಜಯ ದಾಖಲಿಸಿದರೆ ಭಾರತ ತಂಡವು ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ನೆಗೆತ ಕಾಣಲಿದೆ. ಪ್ರಸ್ತುತ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಅನುಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನಗಳನ್ನು ಹಂಚಿಕೊಂಡಿದೆ.

ಆಡುವ ಬಳಗ ಇಂತಿದೆ:

ಭಾರತ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್ (ಉಪನಾಯಕ ಮತ್ತು ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ದೀಪಕ್ ಚಾಹರ್, ಟಿ.ನಟರಾಜನ್, ಶಾರ್ದೂಲ್ ಠಾಕೂರ್.

ಆಸ್ಟ್ರೇಲಿಯಾ: ಆ್ಯರನ್ ಫಿಂಚ್ (ನಾಯಕ), ಮ್ಯಾಥ್ಯೂ ವೇಡ್ (ನಾಯಕ), ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಡಾರ್ಸಿ ಶಾರ್ಟ್, ಮೊಯಿಸಸ್ ಹೆನ್ರಿಕ್ಸ್, ಡ್ಯಾನಿಯಲ್ ಸ್ಯಾಮ್ಸ್, ಸೀನ್ ಅಬಾಟ್, ಮಿಷೆಲ್ ಸ್ವೆಪ್ಸನ್, ಆ್ಯಂಡ್ರ್ಯೂ ಟೈ ಮತ್ತು ಆ್ಯಡಂ ಜಂಪಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.