ಶುಕ್ರವಾರ, ಫೆಬ್ರವರಿ 26, 2021
27 °C

ಭಾರತದ ಕೆಳಕ್ರಮಾಂಕ ಬ್ಯಾಟಿಂಗ್‌ ಬಲಗೊಳ್ಳಲಿ: ಕ್ಲೈವ್‌ ಲಾಯ್ಡ್‌ ಸಲಹೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬರ್ಮಿಂಗ್‌ಹ್ಯಾಂ: ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಅಸಾಮಾನ್ಯ ತಂಡಗಳಲ್ಲಿ ಒಂದಾಗಿದ್ದು, ತನ್ನ ಕೆಳ ಕ್ರಮಾಂಕದ ಬ್ಯಾಟಿಂಗ್‌ ಇನ್ನಷ್ಟು ಬಲಗೊಳಿಸಬೇಕು ಎಂದು ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ದಿಗ್ಗಜ ಕ್ಲೈವ್‌ ಲಾಯ್ಡ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಪಾಯಿಂಟ್‌ ಪಟ್ಟಿಯಲ್ಲಿ ಸದ್ಯ ಎರಡನೇ ಸ್ಥಾನದಲ್ಲಿರುವ ಕೊಹ್ಲಿ ಪಡೆ, ಸೆಮಿಫೈನಲ್‌ ತಲುಪುವ ಹಂತದಲ್ಲಿದೆ. ತನ್ನ ಬಳಿ 14 ಪಾಯಿಂಟ್‌ಗಳನ್ನು ಹೊಂದಿರುವ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ.

’ಭಾರತ ತಂಡ ಆಯ್ಕೆಯಲ್ಲಿ ಗೊಂದಲದ ಸ್ಥಿತಿಯಲ್ಲಿದೆ. ಇಂಗ್ಲೆಂಡ್‌ ತಂಡ ಭಾರತದ ವಿರುದ್ಧ ಸ್ಪಿನ್ನರ್‌ಗಳನ್ನು ದಾಳಿಗಿಳಿಸುವ ಮೂಲಕ ಸೂಕ್ತ ಆಟವಾಡಿತ್ತು. ಕೆಳ ಕ್ರಮಾಂಕದ ಬ್ಯಾಟಿಂಗ್‌ನ್ನು ಭಾರತ ಇನ್ನಷ್ಟು ಗಟ್ಟಿಗೊಳಿಸಬೇಕಿದೆ’ ಎಂದು 1975 ಮತ್ತು 1979ರಲ್ಲಿ ವೆಸ್ಟ್‌ ಇಂಡೀಸ್‌ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ಲಾಯ್ಡ್ ಐಸಿಸಿಗೆ ಬರೆದ ಅಂಕಣದಲ್ಲಿ ಉಲ್ಲೇಖಿಸಿದ್ದಾರೆ.

‘ಸದ್ಯ ಭಾರತ ಹಾಗೂ ಆಸ್ಟ್ರೇಲಿಯಾ  ಉತ್ತಮ ಸ್ಥಿತಿಯಲ್ಲಿವೆ. ಪರಿಸ್ಥಿತಿಯನ್ನು ಚೆನ್ನಾಗಿ ಅರಿತುಕೊಂಡಿವೆ. ಈಗಾಗಲೇ ನಾಲ್ಕರ ಘಟ್ಟ ಪ್ರವೇಶಿಸಿರುವ ಆಸ್ಟ್ರೇಲಿಯಾ ತಂಡವನ್ನು ಕೊಹ್ಲಿ ಪಡೆಯು ಕೂಡಿಕೊಳ್ಳುವ ಸಾಧ್ಯತೆಯಿದೆ’ ಎಂದು ಅವರು ಹೇಳಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು