ವಿಶಾಖಪಟ್ಟಣ: ನ್ಯೂಜಿಲೆಂಡ್ ವಿರುದ್ಧದ ಟಿ–20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು, ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಅದರಲ್ಲೂ ಬ್ಯಾಟರ್ಗಳು ರನ್ ಮಳೆ ಹರಿಸುತ್ತಿದ್ದಾರೆ.

ನಾಲ್ಕನೇ ಪಂದ್ಯಕ್ಕಾಗಿ ಭಾರತ ತಂಡದಲ್ಲಿ 1 ಬದಲಾವಣೆ ಮಾಡಿದೆ. ಗಾಯಾಳಾಗಿರುವ ಇಶಾನ್ ಕಿಶನ್ ಬದಲಿಗೆ ಅರ್ಷದೀಪ್ ಸಿಂಗ್ ತಂಡದಲ್ಲಿ ಸ್ಥಾನಪಡೆದಿದ್ದಾರೆ.

ಬೌಲಿಂಗ್ ವೈಫಲ್ಯ ಅನುಭವಿಸುತ್ತಿರುವ ನ್ಯೂಜಿಲೆಂಡ್ ತಂಡ ಕೂಡ 1 ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

ವಿಶಾಖಪಟ್ಟಣ ಮೈದಾನವು ಬ್ಯಾಟಿಂಗ್ ಸ್ನೇಹಿ ಆಗಿದ್ದು, ರನ್ ಹೊಳೆ ಹರಿಯುವ ನಿರೀಕ್ಷೆಯಿದೆ.

ಐದು ಪಂದ್ಯಗಳ ಸರಣಿಯಲ್ಲಿ 3–0 ಅಲ್ಲಿ ಮುನ್ನಡೆಯಲ್ಲಿರುವ ಭಾರತ ತಂಡವು, ನಾಲ್ಕನೇ ಪಂದ್ಯದಲ್ಲೂ ಗೆಲ್ಲುವ ವಿಶ್ವಾಸದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.