ಸೌತಾಂಪ್ಟನ್‌ನಲ್ಲಿ ಡಬ್ಲ್ಯುಟಿಸಿ ಫೈನಲ್: ಸೌರವ್ ಗಂಗೂಲಿ

ನವದೆಹಲಿ: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯವು ಸೌತಾಂಪ್ಟನ್‌ನ ಏಜಿಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಜೂನ್ 18ರಿಂದ 22ರವರೆಗೆ ಈ ಹಣಾಹಣಿ ನಡೆಯಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ ತಿಳಿಸಿದ್ದಾರೆ.
ಫೈನಲ್ ಪಂದ್ಯವನ್ನು ಈ ಮೊದಲು ಲಾರ್ಡ್ಸ್ ಕ್ರೀಡಾಂಗಣದಲ್ಲಿ ಆಯೋಜಿಸಲು ಉದ್ದೇಶಿಸಲಾಗಿತ್ತು. ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಪಂಚತಾರಾ ಸೌಲಭ್ಯಗಳಿರುವುದರಿಂದ ತಂಡಗಳಿಗೆ ಜೀವಸುರಕ್ಷಾ ವಾತಾವರಣ ಕಲ್ಪಿಸಿಕೊಡಲು ಐಸಿಸಿ ಹಾಗೂ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗಳಿಗೆ ಅನುಕೂಲವಾಗಲಿದೆ.
ಇತ್ತೀಚೆಗೆ ಕೊನೆಗೊಂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು 3–1ರಿಂದ ತನ್ನದಾಗಿಸಿಕೊಂಡಿರುವ ಭಾರತ, ಫೈನಲ್ ಪ್ರವೇಶಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.