ಶನಿವಾರ, ಡಿಸೆಂಬರ್ 4, 2021
24 °C

ಭಾರತ-ಪಾಕ್ ಪಂದ್ಯ ರಾಷ್ಟ್ರೀಯ ಹಿತಾಸಕ್ತಿ, ರಾಷ್ಟ್ರಧರ್ಮದ ವಿರುದ್ಧ: ರಾಮದೇವ್

ಪಿಟಿಐ Updated:

ಅಕ್ಷರ ಗಾತ್ರ : | |

ನಾಗ್ಪುರ: ಭಾರತ ಹಾಗೂ ಪಾಕಿಸ್ತಾನದ ನಡುವಣ ಪಂದ್ಯವು ರಾಷ್ಟ್ರೀಯ ಹಿತಾಸಕ್ತಿ ಹಾಗೂ ರಾಷ್ಟ್ರಧರ್ಮದ ವಿರುದ್ಧವಾಗಿದೆ ಎಂದು ಯೋಗಗುರು ಬಾಬಾ ರಾಮದೇವ್ ಹೇಳಿದ್ದಾರೆ.

ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕಕಾಲದಲ್ಲಿ ಕ್ರಿಕೆಟ್ ಆಟ ಹಾಗೂ ಭಯೋತ್ಪಾದನೆ ನಡೆಯಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ: 

'ಇಂತಹ ಪರಿಸ್ಥಿತಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಕ್ರಿಕೆಟ್ ಆಡುವುದು ರಾಷ್ಟ್ರೀಯ ಹಿತಾಸಕ್ತಿ ಹಾಗೂ ರಾಷ್ಟ್ರಧರ್ಮದ ವಿರುದ್ಧವಾಗಿದೆ ಎಂದು ನಾನು ಭಾವಿಸುತ್ತೇನೆ. ಕ್ರಿಕೆಟ್ ಹಾಗೂ ಭಯೋತ್ಪಾದನೆಯನ್ನು ಏಕಕಾಲಕ್ಕೆ ಆಡಲಾಗುವುದಿಲ್ಲ' ಎಂದು ಹೇಳಿದರು.

ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವು ದುಬೈಯಲ್ಲಿ ಇಂದು ಸಂಜೆ 7.30ಕ್ಕೆ ಆರಂಭವಾಗಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ದಾಳಿಯ ಹಿನ್ನೆಲೆಯಲ್ಲಿ ಪಂದ್ಯವನ್ನು ಬಹಿಷ್ಕರಿಸುವಂತೆ ಬೇಡಿಕೆ ಕೇಳಿಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು