ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆಬ್ರುವರಿಯಲ್ಲಿ ಭಾರತ–ಇಂಗ್ಲೆಂಡ್ ಟೆಸ್ಟ್ ಸರಣಿ: ಸೌರವ್ ಗಂಗೂಲಿ

Last Updated 23 ಆಗಸ್ಟ್ 2020, 15:26 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಮುಂದಿನ ವರ್ಷದ ಆವೃತ್ತಿಗೂ ಮೊದಲು ಫೆಬ್ರುವರಿಯಲ್ಲಿ ಭಾರತದಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಯೋಜಿಸಲು ಸಿದ್ಧ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದರು.

ಈ ವರ್ಷದ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲಿ ಇಂಗ್ಲೆಂಡ್ ಎದುರಿನ ಸರಣಿ ಆಯೋಜಿಸುವ ಯೋಜನೆ ಇತ್ತು. ಆದರೆ ಕೊರೊನಾ ಕಾಟದಿಂದಾಗಿ ಇದು ಸಾಧ್ಯವಾಗಲಿಲ್ಲ. ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ ವೇಳಾಪಟ್ಟಿಯಂತೆ ಡಿಸೆಂಬರ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ನಂತರ ಇಂಗ್ಲೆಂಡ್ ತಂಡ ಭಾರತಕ್ಕೆ ಬರಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಕೊನೆಯ ಐದು ಪಂದ್ಯಗಳನ್ನು ಭಾರತವು ಇಂಗ್ಲೆಂಡ್ ವಿರುದ್ಧ ಆಡಲಿದೆ.

‘ಬಿಸಿಸಿಐ ಮತ್ತು ಭಾರತ ತಂಡ ವಿದೇಶ ಪ್ರವಾಸದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಿರ್ವಹಿಸಲು ಬದ್ಧವಾಗಿದೆ. ಮುಂದಿನ ವರ್ಷ ಟಿ–20 ವಿಶ್ವಕಪ್ ಟೂರ್ನಿ ಮತ್ತು 2023ರಲ್ಲಿ ಏಕದಿನ ವಿಶ್ವಕಪ್ ಆಯೋಜಿಸುವುದಕ್ಕೂ ನಾವು ಸಿದ್ಧವಿದ್ದೇವೆ’ ಎಂದು ಗಂಗೂಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT