ಶುಕ್ರವಾರ, ಜೂನ್ 5, 2020
27 °C

ಆಗಸ್ಟ್‌ನಲ್ಲಿ ಭಾರತ–ದಕ್ಷಿಣ ಆಫ್ರಿಕಾ ಟ್ವೆಂಟಿ–20 ಸರಣಿ?

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೊರೊನಾ–19 ಕಾಟ ಹೆಚ್ಚುತ್ತಿರುವುದರ ನಡುವೆಯೇ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಆಗಸ್ಟ್‌ನಲ್ಲಿ ಟ್ವೆಂಟಿ–20 ಕ್ರಿಕೆಟ್ ಸರಣಿ ಆಯೋಜಿಸಲು ಒಪ್ಪಂದವಾಗಿದ್ದು ಸರ್ಕಾರಗಳ ಅನುಮತಿಗಾಗಿ ಕಾಯಲಾಗುತ್ತಿದೆ.  

ಗುರುವಾರ ಆನ್‌ಲೈನ್ ಮೂಲಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಲಾಗಿದೆ. ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಒಪ್ಪಿಗೆ ಸೂಚಿಸಿರುವುದಕ್ಕೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಜಾಕ್ಸ್ ಫಾಲ್ ಹರ್ಷ ವ್ಯಕ್ತಪಡಿಸಿದ್ದಾರೆ. ಆಗಸ್ಟ್ ಅಂತ್ಯದಲ್ಲಿ ಸರಣಿ ನಡೆಸಲು ನಿರ್ಧರಿಸಲಾಗಿದ್ದು ಮುಂದೂಡುವ ಸ್ಥಿತಿ ನಿರ್ಮಾಣವಾದರೆ ಕೆಲವೇ ದಿನ ಮಾತ್ರ ಮುಂದಕ್ಕೆ ಹಾಕಲಾಗುವುದು ಎಂದು ಫಾಲ್ ತಿಳಿಸಿದ್ದಾರೆ.

ಬಿಸಿಸಿಐ ಪದಾಧಿಕಾರಿಯೊಬ್ಬರು ಪ್ರತಿಕ್ರಿಯಿಸಿ ಸರಣಿ ನಡೆಯುವ ಎಲ್ಲ ಸಾಧ್ಯತೆಗಳೂ ಇದ್ದು ಮೊದಲು ಕಣಕ್ಕೆ ಇಳಿಯಲು ಸಿದ್ಧರಿರುವ ಆಟಗಾರರನ್ನು ಗುರುತಿಸಬೇಕಾಗಿದೆ ಎಂದರು. ಈ ಸರಣಿಯಲ್ಲಿ ಆಡಲು ಒಪ್ಪಿಗೆ ಸೂಚಿಸುವ ಮೂಲಕ ಬಿಸಿಸಿಐ ಅಕ್ಟೋಬರ್ –ನವೆಂಬರ್‌ನಲ್ಲಿ ಐಪಿಎಲ್ ಆಯೋಜಿಸುವ ಹುಮ್ಮಸ್ಸಿನಲ್ಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು