ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರದಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಹಿನ್ನಡೆಯಾಗಿದ್ದು, ನಾಯಕ ಶುಭಮನ್ ಗಿಲ್ ಅವರು ತಂಡದಿಂದ ಹೊರಬಿದ್ದಿದ್ದಾರೆ.

ಕೊಲ್ಕತ್ತದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವಾಗ ಗಿಲ್ ಅವರು ಕುತ್ತಿಗೆ ಸ್ನಾಯು ಸೆಳೆತಕ್ಕೆ ಒಳಗಾಗಿ ಪಂದ್ಯದಿಂದ ಹೊರಬಿದ್ದಿದ್ದರು. ಭಾರತ ಆ ಪಂದ್ಯದಲ್ಲಿ 30 ರನ್ಗಳಿಂದ ಸೋಲು ಅನುಭವಿಸಿತ್ತು.

ಗಿಲ್ ಆರೋಗ್ಯದ ಕುರಿತು ಪಿಟಿಐಗೆ ಮಾಹಿತಿ ನೀಡಿರುವ ಹೆಸರು ಬಹಿರಂಗಪಡಿಸಲು ಇಚ್ಚಿಸದ ಬಿಸಿಸಿಐನ ಉನ್ನತ ಮೂಲವೊಂದು ‘ಗಿಲ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಅವರು ಶೀಘ್ರ ಚೇತರಿಕೆಗಾಗಿ ಶ್ರಮ ವಹಿಸುತ್ತಿದ್ದಾರೆ’ ಎಂದಿದ್ದಾರೆ.

ಗಿಲ್ ಎರಡನೇ ಟೆಸ್ಟ್ಗೂ ಮುನ್ನ ಭಾರತ ತಂಡದ ಜೊತೆ ಗುವಾಹಟಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಅವರು ಸಂಪೂರ್ಣ ಚೇತರಿಸಿಕೊಳ್ಳದ ಹಿನ್ನೆಲೆ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಮುಂಬರುವ ಏಕದಿನ ಸರಣಿಯನ್ನು ಅವರು ಆಡುತ್ತಾರಾ? ಎಂಬುದನ್ನು ಕಾದು ನೋಡಬೇಕಿದೆ.
.ಕುತ್ತಿಗೆ ನೋವು | ಅಂತಿಮ ಪಂದ್ಯದಲ್ಲಿ ಗಿಲ್ ಆಡುವುದು ಅನುಮಾನ; ದೇವದತ್ತಗೆ ಅವಕಾಶ?.Ind vs SA | ಗುವಾಹಟಿ ಟೆಸ್ಟ್ಗೆ ದ.ಆಫ್ರಿಕಾ ಸಜ್ಜು: ವೇಗಿ ರಬಾಡ ಆಡ್ತಾರಾ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.