ಧರ್ಮಶಾಲಾ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ–20 ಪಂದ್ಯದಲ್ಲಿ ಭಾರತವು ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಲ್ಲೂ ಉತ್ತಮ ಪ್ರದರ್ಶನ ನೀಡುವ ಮೂಲಕ ಏಳು ವಿಕೆಟ್ಗಳ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 20 ಓವರ್ಗಳ ಅಂತ್ಯಕ್ಕೆ 10 ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿತು.

118 ರನ್ಗಳ ಗುರಿ ಬೆನ್ನಟ್ಟಿದ ಭಾರತವು 15.5 ಓವರ್ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು ಓವರ್ಗಳಲ್ಲಿ ಗುರಿ ಮುಟ್ಟಿತು.

ನಾಯಕ ಏಡನ್ ಮರ್ಕರಂ 46 ಎಸೆತಗಳಲ್ಲಿ 61 ರನ್ ( 6 ಬೌಂಡರಿ ಹಾಗೂ 2 ಸಿಕ್ಸರ್) ಗಳಿಸುವ ಮೂಲಕ ಹರಿಣಗಳ ಇನಿಂಗ್ಸ್ ಕುಸಿಯದಂತೆ ನೋಡಿಕೊಂಡರು. ಭಾರತದ ಲಯಬದ್ಧ ಬೌಲಿಂಗ್ ದಾಳಿಯ ಎದುರು, ದಕ್ಷಿಣ ಆಫ್ರಿಕಾ ತಂಡದ ಬ್ಯಾಟರ್ಗಳು ರನ್ ಗಳಿಸಲು ಪರದಾಡಿದರು.

ಟೀಂ ಇಂಡಿಯಾ ಪರ ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಕುಲದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಕಬಳಿಸುವ ಮೂಲಕ ಹರಿಣಗಳನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದರು.

118 ರನ್ಗಳ ಸಾಧಾರಣ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 18 ಎಸೆತಗಳಲ್ಲಿ 35 ರನ್ ( 3 ಬೌಂಡರಿ ಹಾಗೂ 3 ಸಿಕ್ಸರ್) ಹಾಗೂ ಶುಭಮನ್ ಗಿಲ್ 28 ಎಸೆತಗಳಲ್ಲಿ 28 ರನ್( 5 ಬೌಂಡರಿ) ಗಳಿಸುವ ಮೂಲಕ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್ಗೆ 5.2 ಓವರ್ಗಳಲ್ಲಿ 60 ರನ್ಗಳ ಜೊತೆಯಾಟ ಆಡಿದರು.

ಮೂರನೇ ಕ್ರಮಾಂಕದಲ್ಲಿ ಆಟವಾಡಿದ ತಿಲಕ್ ವರ್ಮಾ 35 ಎಸೆತಗಳಲ್ಲಿ ಅಜೇಯ 25 ರನ್ ( ಬೌಂಡರಿ ಹಾಗೂ ಸಿಕ್ಸರ್) ರನ್ ಗಳಿಸಿದರು. ನಾಯಕ ಸೂರ್ಯಕುಮಾರ್ ಯಾದವ್ 12 ರನ್ ಗಳಿಸಿ ಔಟ್ ಆದರು.

3ನೇ ಟಿ–20 ಪಂದ್ಯವನ್ನು ಗೆಲ್ಲುವ ಐದು ಪಂದ್ಯಗಳ ಸರಣಿಯಲ್ಲಿ ಭಾರತವು 2–1ರಲ್ಲಿ ಮುನ್ನಡೆ ಪಡೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.