ದುಬೈ: ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ತವರು ಟೆಸ್ಟ್ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ಕನ್ನಡಿಗ ದೇವದತ್ತ ಪಡಿಕ್ಕಲ್, ಎನ್. ಜಗದೀಶನ್ ಅವರಿಗೆ ಅವಕಾಶ ನೀಡಲಾಗಿದ್ದು, ಕರುಣ್ ನಾಯರ್, ಅಭಿಮನ್ಯು ಈಶ್ವರನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ವೇಗಿ ಜಸ್ಪ್ರೀತ್ ಬೂಮ್ರಾ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಲಾಗಿದೆ. ಕೆಲಸದ ಹೊರೆ ನಿರ್ವಹಣೆಯಿಂದಾಗಿ ಇಂಗ್ಲೆಂಡ್ನಲ್ಲಿ ನಡೆದ ಐದು ಟೆಸ್ಟ್ ಪಂದ್ಯಗಳ ಪೈಕಿ ಕೇವಲ ಮೂರು ಪಂದ್ಯಗಳನ್ನು ಆಡಿದ್ದ ಬುಮ್ರಾ, ಅಕ್ಟೋಬರ್ 2ರಂದು ಆರಂಭವಾಗುವ ಎರಡು ಪಂದ್ಯಗಳ ವೆಸ್ಟ್ ಇಂಡೀಸ್ ಸರಣಿಗೆ ತಾವು ಲಭ್ಯವಾಗುವಂತೆ ನೋಡಿಕೊಂಡಿದ್ದರು.

ಶುಭಮನ್ ಗಿಲ್ ನೇತೃತ್ವದ ತಂಡದ ಉಪನಾಯಕರಾಗಿ ರವೀಂದ್ರ ಜಡೇಜಾ ಅವರನ್ನು ಹೆಸರಿಸಲಾಗಿದೆ.

ಇಂಗ್ಲೆಂಡ್ ಸರಣಿಯ ಸಮಯದಲ್ಲಿ ಪಾದದ ಮೂಳೆ ಮುರಿತಕ್ಕೊಳಗಾಗಿದ್ದ ಉಪನಾಯಕ ರಿಷಭ್ ಪಂತ್ ಇನ್ನೂ ಸಂಪೂರ್ಣ ಚೇತರಿಸಿಕೊಂಡಿಲ್ಲ.

‘ನವೆಂಬರ್ ತಿಂಗಳಲ್ಲಿ ತವರಿನಲ್ಲಿ ನಡೆಯುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹೇಳಿದ್ದಾರೆ.

ಅವರ ಅನುಪಸ್ಥಿತಿಯಲ್ಲಿ ಇಬ್ಬರು ವಿಕೆಟ್ ಕೀಪರ್ಗಳನ್ನು(ಧ್ರುವ್ ಜುರೇಲ್ ಮತ್ತು ಎನ್. ಜಗದೀಶನ್) ತಂಡಕ್ಕೆ ಸೇರ್ಪಡೆ ಮಾಡಲಾಗಿದೆ.

15 ಸದಸ್ಯರ ಭಾರತ ತಂಡ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜ (ಉಪನಾಯಕ), ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಎನ್. ಜಗದೀಶನ್ (ವಿಕೆಟ್ ಕೀಪರ್), ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಕುಲ್ದೀಪ್ ಯಾದವ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.