ಜುಲೈ 18ರಿಂದ ಭಾರತ– ಶ್ರೀಲಂಕಾ ಕ್ರಿಕೆಟ್ ಸರಣಿ ಆರಂಭ; ಜಯ್ ಶಾ

ಕೊಲಂಬೊ: ಜುಲೈ 18ರಿಂದ ಭಾರತ– ಶ್ರೀಲಂಕಾ ನಡುವಿನ ನಿಗದಿತ ಓವರ್‌ಗಳ ಕ್ರಿಕೆಟ್ ಸರಣಿ ಆರಂಭವಾಗಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪಿಟಿಐಗೆ ತಿಳಿಸಿದ್ದಾರೆ.
ಜುಲೈ 13 ರಂದು ಮೂರು ಪಂದ್ಯಗಳ ಏಕದಿನ ಸರಣಿ ಆರಂಭಿಸಲು ದಿನಾಂಕ ನಿಗದಿಪಡಿಸಲಾಗಿತ್ತು. ಈ ಮಧ್ಯೆ, ಲಂಕಾದ ಬ್ಯಾಟಿಂಗ್ ಕೋಚ್ ಗ್ರ್ಯಾಂಟ್ ಫ್ಲವರ್ ಮತ್ತು ಡೇಟಾ ವಿಶ್ಲೇಷಕ ಜಿ.ಟಿ. ನಿರೋಶನ್ ಅವರಿಗೆ ಇಂಗ್ಲೆಂಡ್ ಪ್ರವಾಸದಿಂದ ಹಿಂದಿರುಗಿದ ಬೆನ್ನಲ್ಲೇ ಕೋವಿಡ್ ಪಾಸಿಟಿವ್ ಆಗಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸರಣಿ ಆರಂಭದ ದಿನಾಂಕವನ್ನು ಮುಂದೂಡಿ, ತಂಡದ ಸದಸ್ಯರನ್ನು ಕ್ವಾರಂಟೈನಲ್ಲಿ ಇರಿಸಲಾಗಿದೆ.
‘ಸರಣಿ ಆರಂಭಕ್ಕೆ ಜುಲೈ 17ರ ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಿ ಚರ್ಚೆ ನಡೆಸಿದ್ದೆವು. ಇದೀಗ, ಜುಲೈ 18 ರಿಂದ ಸರಣಿ ಆರಂಭಕ್ಕೆ ನಿಗದಿಪಡಿಸಲಾಗಿದೆ’ ಎಂದು ಅವರು ತಿಳಿಸಿದರು.
ಆತಿಥೇಯ ತಂಡದ ಕ್ಯಾಂಪ್‌ನಲ್ಲಿ ಕೋವಿಡ್–19 ಸೋಂಕಿನ ಪ್ರಕರಣಗಳು ಕಂಡುಬಂದ ಕಾರಣ ಭಾರತ-ಶ್ರೀಲಂಕಾ ನಡುವಿನ ಏಕದಿನ ಸರಣಿಯನ್ನು ಜುಲೈ 18ರಿಂದ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಾ ಪಿಟಿಐಗೆ ತಿಳಿಸಿದ್ದಾರೆ.
ಮೂರು ಏಕದಿನ ಪಂದ್ಯಗಳು ಈಗ ಜುಲೈ 18, 20 ಮತ್ತು 23 ರಂದು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದ್ದು, ನಂತರ ಟಿ 20 ಅಂತರರಾಷ್ಟ್ರೀಯ ಪಂದ್ಯಗಳು ಜುಲೈ 25 ರಿಂದ ಪ್ರಾರಂಭವಾಗಲಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.