ಆಸಿಸ್‌ ವಿರುದ್ಧದ ಮೂರು– ನಾಲ್ಕನೇ ಟೆಸ್ಟ್‌ ಪಂದ್ಯ: ಕನ್ನಡಿಗ ಮಯಂಕ್‌ಗೆ ಅವಕಾಶ

7
ಮೂರು ಮತ್ತು ನಾಲ್ಕನೇ ಟೆಸ್ಟ್‌ಗಳಿಗೆ ಭಾರತ ತಂಡ

ಆಸಿಸ್‌ ವಿರುದ್ಧದ ಮೂರು– ನಾಲ್ಕನೇ ಟೆಸ್ಟ್‌ ಪಂದ್ಯ: ಕನ್ನಡಿಗ ಮಯಂಕ್‌ಗೆ ಅವಕಾಶ

Published:
Updated:
Deccan Herald

ಪರ್ತ್‌: ಕರ್ನಾಟಕದ ಮಯಂಕ್‌ ಅಗರವಾಲ್‌ ಅವರು ಆಸ್ಟ್ರೇಲಿಯಾ ಎದುರಿನ ಮೂರು ಮತ್ತು ನಾಲ್ಕನೇ ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.

ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಸೀನಿಯರ್‌ ಆಯ್ಕೆ ಸಮಿತಿ ಸೋಮವಾರ 19 ಸದಸ್ಯರ ತಂಡವನ್ನು ಪ್ರಕಟಿಸಿದೆ.

ಕ್ರಿಕೆಟ್‌ ಆಸ್ಟ್ರೇಲಿಯಾ ಇಲೆವನ್‌ ಎದುರಿನ ಅಭ್ಯಾಸ ಪಂದ್ಯದ ವೇಳೆ ಗಾಯಗೊಂಡಿದ್ದ ಪೃಥ್ವಿ ಶಾ ಸರಣಿಗೆ ಅಲಭ್ಯರಾಗಿದ್ದಾರೆ. ಹೀಗಾಗಿ ಮಯಂಕ್‌ಗೆ ಅವಕಾಶ ನೀಡಲಾಗಿದೆ.

ಆರಂಭಿಕ ಬ್ಯಾಟ್ಸ್‌ಮನ್‌ ಮಯಂಕ್‌, ದೇಶಿ ಟೂರ್ನಿಗಳಲ್ಲಿ ಮಿಂಚಿದ್ದರು. ಸೋಮವಾರ ಮುಗಿದ ಗುಜರಾತ್‌ ಎದುರಿನ ರಣಜಿ ಪಂದ್ಯದಲ್ಲಿ ಆಡಿದ್ದ ಅವರು ಎರಡು ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 25 ಮತ್ತು 53ರನ್‌ ಗಳಿಸಿದ್ದರು.

ಕೆ.ಎಲ್‌.ರಾಹುಲ್‌, ಸತತ ವೈಫಲ್ಯ ಅನುಭವಿಸುತ್ತಿದ್ದಾರೆ. ಹೀಗಾಗಿ ಮೂರನೇ ಟೆಸ್ಟ್‌ನಲ್ಲಿ ಮಯಂಕ್‌ಗೆ ಆಡುವ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.

ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರಿಗೂ ಸ್ಥಾನ ಸಿಕ್ಕಿದೆ. ಮೂರನೇ ಟೆಸ್ಟ್‌ ಪಂದ್ಯ ಇದೇ ತಿಂಗಳ 26ರಿಂದ ಮೆಲ್ಬರ್ನ್‌ನಲ್ಲಿ ನಡೆಯಲಿದೆ. ನಾಲ್ಕನೇ ಟೆಸ್ಟ್‌ ಸಿಡ್ನಿಯಲ್ಲಿ ಆಯೋಜನೆಯಾಗಿದೆ.

ತಂಡ ಇಂತಿದೆ: ವಿರಾಟ್‌ ಕೊಹ್ಲಿ (ನಾಯಕ), ಮುರಳಿ ವಿಜಯ್‌, ಕೆ.ಎಲ್‌.ರಾಹುಲ್‌, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪ ನಾಯಕ), ಹನುಮ ವಿಹಾರಿ, ರೋಹಿತ್‌ ಶರ್ಮಾ, ರಿಷಭ್‌ ಪಂತ್‌ ಮತ್ತು ಪಾರ್ಥೀವ್‌ ಪಟೇಲ್‌ (ಇಬ್ಬರೂ ವಿಕೆಟ್‌ ಕೀಪರ್‌), ಆರ್‌.ಅಶ್ವಿನ್‌, ರವೀಂದ್ರ ಜಡೇಜ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಶಮಿ, ಇಶಾಂತ್‌ ಶರ್ಮಾ, ಉಮೇಶ್‌ ಯಾದವ್‌, ಜಸ್‌ಪ್ರೀತ್‌ ಬೂಮ್ರಾ, ಭುವನೇಶ್ವರ್‌ ಕುಮಾರ್‌, ಹಾರ್ದಿಕ್‌ ಪಾಂಡ್ಯ ಮತ್ತು ಮಯಂಕ್‌ ಅಗರವಾಲ್‌.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !