ದುಬೈ: ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿದ ಭಾರತ ತಂಡ, ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಪಾಯಿಂಟ್ಸ್ ಪಟ್ಟಿಯಲ್ಲಿ ತನ್ನ ಸ್ಥಿತಿಯನ್ನು ಇನ್ನಷ್ಟು ಬಲಗೊಳಿಸಿದೆ. ನ್ಯೂಜಿಲೆಂಡ್ ವಿರುದ್ಧ ಸೋಮವಾರ ಗಾಲೆಯಲ್ಲಿ ಮೊದಲ ಟೆಸ್ಟ್ ಗೆದ್ದ ಶ್ರೀಲಂಕಾ ಕೂಡ ಫೈನಲ್‌ನಲ್ಲಿ ಸ್ಥಾನ ಪಡೆಯುವ ಪೈಪೋಟಿಯಲ್ಲಿದೆ.