ಗುರುವಾರ , ಏಪ್ರಿಲ್ 2, 2020
19 °C

ಆಸ್ಟ್ರೇಲಿಯಾದಲ್ಲಿ ಪಿಂಕ್ ಬಾಲ್ ಟೆಸ್ಟ್ ಆಡಲಿರುವ ಭಾರತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಈ ವರ್ಷ ಆಸ್ಟ್ರೇಲಿಯಾ ಪ್ರವಾಸ ಮಾಡಲಿರುವ ಭಾರತ ಕ್ರಿಕೆಟ್ ತಂಡವು ಅಲ್ಲಿ ಹಗಲು–ರಾತ್ರಿ ಟೆಸ್ಟ್ ಪಂದ್ಯದಲ್ಲಿ ಆಡಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಭಾರತ ತಂಡವು ಇದುವರೆಗೆ ಹೊರದೇಶದಲ್ಲಿ ಪಿಂಕ್‌ ಬಾಲ್ ಟೆಸ್ಟ್ ಆಡಿಲ್ಲ. ಹೋದ ವರ್ಷದ ನವೆಂಬರ್‌ನಲ್ಲಿ ಮೊಟ್ಟಮೊದಲ ಬಾರಿಗೆ ಕೋಲ್ಕತ್ತದಲ್ಲಿ ಬಾಂಗ್ಲಾದೇಶ ತಂಡದ ಎದುರು ಒಂದು ಟೆಸ್ಟ್ ಆಡಿತ್ತು.

2018–19ರಲ್ಲಿ ಅಡಿಲೇಡ್‌ನಲ್ಲಿ  ಹಗಲು–ರಾತ್ರಿ ಟೆಸ್ಟ್ ಆಡಲು ಭಾರತ ನಿರಾಕರಿಸಿತ್ತು. ಆದರೆ ಈಚೆಗೆ ಭಾರತ ದಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್ ಸರಣಿಯ ಸಂದರ್ಭದಲ್ಲಿ ನಾಯಕ ವಿರಾಟ್ ಕೊಹ್ಲಿ, ತಾವು ಯಾವುದೇ ಕ್ರೀಡಾಂಗಣದಲ್ಲಿಯೂ ಸವಾಲು ಸ್ವೀಕರಿಸಲು ಸಿದ್ಧವಿರುವುದಾಗಿ ಹೇಳಿದ್ದರು. ಗಾಬಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುವ ಸಾಧ್ಯತೆ ಇದೆ. ಕ್ರಿಕೆಟ್  ಆಸ್ಟ್ರೇಲಿಯಾದ ನಿಯೋಗವು ಈಚೆಗೆ ಬಿಸಿಸಿಐ ಪದಾಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು