ದುಬೈ: ಮಹಿಳಾ ಏಕದಿನ ವಿಶ್ವಕಪ್ ಟೂರ್ನಿ ಆರಂಭಕ್ಕೂ ಮೊದಲು, ಭಾರತದ ವನಿತೆಯರು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡದ ಎದುರು ತಲಾ ಒಂದು ಅಭ್ಯಾಸ ಪಂದ್ಯ ಆಡಲಿದ್ದಾರೆ.

ಭಾರತ ಮಹಿಳಾ ತಂಡವು, ಬೆಂಗಳೂರಿನ ಹೊರವಲಯದಲ್ಲಿರುವ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿ ಸೆಪ್ಟೆಂಬರ್ 25ರಂದು ಇಂಗ್ಲೆಂಡ್ ತಂಡದ ವಿರುದ್ಧ ಅಭ್ಯಾಸ ಪಂದ್ಯ ಆಡಲಿದೆ. ಸೆಪ್ಟೆಂಬರ್ 27ರಂದು ನ್ಯೂಜಿಲೆಂಡ್ ತಂಡದ ಎದುರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಲಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ, ಬಿಸಿಸಿಐ ಶ್ರೇಷ್ಠತಾ ಕೇಂದ್ರ, ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣ ಹಾಗೂ ಕೊಲಂಬೊ ಕ್ರಿಕೆಟ್ ಕ್ಲಬ್ ಅಂಗಳದಲ್ಲಿ ಸೆಪ್ಟೆಂಬರ್ 25ರಿಂದ 28ರವರೆಗೆ ಒಟ್ಟು 9 ಅಭ್ಯಾಸ ಪಂದ್ಯಗಳು ನಡೆಯಲಿವೆ’ ಎಂದು ಐಸಿಸಿ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತವು 12 ವರ್ಷಗಳ ನಂತರ ಇದೇ ಮೊದಲ ಬಾರಿ ಈ ಟೂರ್ನಿಯ ಆತಿಥ್ಯ ವಹಿಸಿದೆ. ಕೊಲಂಬೊವನ್ನು ತಟಸ್ಥ ತಾಣವಾಗಿ ಆಯ್ಕೆ ಮಾಡಲಾಗಿದ್ದು, ಪಾಕಿಸ್ತಾನ ತನ್ನ ಎಲ್ಲ ಪಂದ್ಯಗಳನ್ನು (ಅಭ್ಯಾಸ ಪಂದ್ಯಗಳೂ ಒಳಗೊಂಡಂತೆ) ಇಲ್ಲಿ ಆಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.