ಮೊಹಾಲಿ: ಇಲ್ಲಿ ನಡೆಯುತ್ತಿರುವ ಅಫ್ಗಾನಿಸ್ತಾನ ವಿರುದ್ಧದ ಮೊದಲ ಟಿ20 ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಇತ್ತೀಚಿನ ವರದಿಗಳ ಪ್ರಕಾರ, ಅಫ್ಗಾನಿಸ್ತಾನ 10 ಓವರ್ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 57 ರನ್ ಗಳಿಸಿತ್ತು.

ಈ ಸರಣಿಯ ಮೂಲಕ ರೋಹಿತ್ ಮತ್ತು ವಿರಾಟ್ ಕೊಹ್ಲಿ ಅವರಿಬ್ಬರೂ ದೀರ್ಘಾವಧಿ ಬಳಿಕ ಚುಟುಕು ಮಾದರಿಗೆ ಮರಳಿದ್ದಾರೆ. ಆದರೆ ಮೊದಲ ಪಂದ್ಯದಲ್ಲಿ ವಿರಾಟ್ ಆಡುತ್ತಿಲ್ಲ. ನಂತರದ ಎರಡು ಪಂದ್ಯಗಳಲ್ಲಿ ಆಡುವ ನಿರೀಕ್ಷೆ ಇದೆ. ರೋಹಿತ್ ಮತ್ತು ವಿರಾಟ್ ಅವರಿಬ್ಬರೂ ಎರಡು ವರ್ಷಗಳ ಹಿಂದೆ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ನಲ್ಲಿ ಆಡಿದ್ದರು. ನಂತರ ಇಲ್ಲಿಯವರೆಗೂ ಅವರು ಟಿ20 ಸರಣಿಗಳಲ್ಲಿ ವಿಶ್ರಾಂತಿ ಪಡೆದಿದ್ದರು. ಈಗ ಅವರ ಆಟದ ಮೇಲೆ ಎಲ್ಲರ ಗಮನ ನೆಟ್ಟಿದೆ.

ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್, ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್

ಅಫ್ಗಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಅಜ್ಮತುಲ್ಲಾ ಒಮರ್ಜಾಯ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ಫಜಲ್ಹಕ್ ಫಾರೂಕಿ, ನವೀನ್ ಉಲ್ ಹಕ್, ಮುಜೀಬ್ ಉರ್ ರಹಮಾನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.