ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AUS Test:ಪೃಥ್ವಿ, ಮಯಂಕ್ ವಿಕೆಟ್ ಪತನ; ವಿರಾಮಕ್ಕೆ ಭಾರತ 41/2

ಭಾರತಕ್ಕೆ ಆರಂಭಿಕ ಆಘಾತ: ಪೃಥ್ವಿ, ಮಯಂಕ್ ವಿಕೆಟ್ ಪತನ
Last Updated 17 ಡಿಸೆಂಬರ್ 2020, 9:01 IST
ಅಕ್ಷರ ಗಾತ್ರ

ಅಡಿಲೇಡ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಗುರುವಾರ ಇಲ್ಲಿನ ಅಡಿಲೇಡ್ ಓವಲ್‌ನಲ್ಲಿ ಆರಂಭವಾಗಿರುವ ಮೊದಲ ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ.

ಡಿನ್ನರ್ ವಿರಾಮದ ಹೊತ್ತಿಗೆ 25 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 41 ರನ್ ಗಳಿಸಿರುವ ಭಾರತ ತಂಡವು ಸಂಕಷ್ಟಕ್ಕೆ ಸಿಲುಕಿದೆ.

ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಮಿಚೆಲ್ ಸ್ಟಾರ್ಕ್ ಎಸೆದ ಮೊದಲ ಓವರ್‌ನಲ್ಲೇ ಕ್ಲೀನ್ ಬೌಲ್ಡ್ ಆದ ಪೃಥ್ವಿ ಶಾ, ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು.

ಈ ಹಂತದಲ್ಲಿ ಜೊತೆಗೂಡಿದ ಮಯಂಕ್ ಅಗರವಾಲ್ ಹಾಗೂ ಚೇತೇಶ್ವರ ಪೂಜಾರ ಉತ್ತಮ ಜೊತೆಯಾಟ ಕಟ್ಟುವ ಸೂಚನೆ ನೀಡಿದರು. ಆದರೆ 40 ಎಸೆತಗಳಲ್ಲಿ 17 ರನ್ ಗಳಿಸಿದ ಮಯಂಕ್ ವಿಕೆಟ್ ಉಡಾಯಿಸಿದ ಪ್ಯಾಟ್ ಕಮಿನ್ಸ್ ಭಾರತಕ್ಕೆ ಎರಡನೇ ಆಘಾತ ನೀಡಿದರು.

ಈಗ ಕ್ರೀಸಿನಲ್ಲಿರುವ ಚೇತೇಶ್ವರ ಪೂಜಾರ (17*) ಹಾಗೂ ನಾಯಕ ವಿರಾಟ್ ಕೊಹ್ಲಿ (5*) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. 88 ಎಸೆತಗಳನ್ನು ಎದುರಿಸಿರುವ ಪೂಜಾರ 17 ರನ್ ಗಳಿಸಿ ದಿಟ್ಟ ಹೋರಾಟ ನೀಡುತ್ತಿದ್ದಾರೆ.

ಆಡುವ ಬಳಗ ಇಂತಿದೆ:

ಭಾರತ: ವಿರಾಟ್ ಕೊಹ್ಲಿ (ನಾಯಕ), ಪೃಥ್ವಿ ಶಾ, ಮಯಂಕ್ ಅಗರವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ ಮತ್ತು ಜಸ್‌ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ: ಜೋ ಬರ್ನ್ಸ್, ಮ್ಯಾಥ್ಯೂ ವೇಡ್, ಮಾರ್ನಸ್ ಲಾಬುಷೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಟಿಮ್ ಪೇನ್ (ನಾಯಕ, ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಥನ್ ಲಿಯನ್, ಜೋಶ್ ಹ್ಯಾಜಲ್‌ವುಡ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT