ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AUS Test: ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್

ಭಾರತ vs ಆಸ್ಟ್ರೇಲಿಯಾ ಚೊಚ್ಚಲ ಡೇ-ನೈಟ್ ಟೆಸ್ಟ್ ಪಂದ್ಯ
Last Updated 17 ಡಿಸೆಂಬರ್ 2020, 7:20 IST
ಅಕ್ಷರ ಗಾತ್ರ

ಅಡಿಲೇಡ್: ಆತಿಥೇಯ ಆಸ್ಟ್ರೇಲಿಯಾ ಹಾಗೂ ಭಾರತ ನಡುವಣ ಮೊದಲ ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಪಂದ್ಯ ಗುರುವಾರ ಇಲ್ಲಿನ ಅಡಿಲೇಡ್ ಓವಲ್ ಮೈದಾನದಲ್ಲಿ ಆರಂಭವಾಗಿದೆ.

ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಪಂದ್ಯದ ಹಿಂದಿನ ದಿನವೇ ಭಾರತ ತಂಡವು ಆಡುವ ಬಳಗವನ್ನು ಘೋಷಿಸಿತ್ತು. ಮೊದಲ ಪಂದ್ಯದ ಬಳಿಕ ತವರಿಗೆ ಮರಳುತ್ತಿರುವ ಕಪ್ತಾನ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಪೃಥ್ವಿ ಶಾ ಹಾಗೂ ಮಯಂಕ್ ಅಗರವಾಲ್ ನಾಯಕನ ಮೆಚ್ಚುಗೆಗೆ ಪಾತ್ರವಾಗಿದ್ದು, ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇದರಿಂದಾಗಿ ಶುಭಮನ್ ಗಿಲ್ ಹಾಗೂ ಕೆಎಲ್ ರಾಹುಲ್ ಅವಕಾಶ ವಂಚಿತವಾಗಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಹಾಗೂ ಉಪನಾಯಕ ಅಜಿಂಕ್ಯ ರಹಾನೆ ಬಲ ತುಂಬಲಿದ್ದಾರೆ. ಕೆಳ ಕ್ರಮಾಂಕದಲ್ಲಿ ಹನುಮ ವಿಹಾರಿಗೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ವೃದ್ಧಿಮಾನ್ ಸಹಾ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಇನ್ನು ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ವೇಗದ ಅಸ್ತ್ರವಾಗಲಿದ್ದಾರೆ. ಇವರಿಗೆ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸಾಥ್ ನೀಡಲಿದ್ದಾರೆ. ಅಲ್ಲದೆ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ರವೀಂದ್ರ ಜಡೇಜ ಅವರ ಆಯ್ಕೆಯನ್ನು ಪರಿಗಣಿಸಿಲ್ಲ.

ಇನ್ನುಳಿದಂತೆ ರಿಷಭ್ ಪಂತ್, ಕುಲ್‌ದೀಪ್ ಯಾದವ್, ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಅವಕಾಶ ವಂಚಿತವಾಗಿದ್ದಾರೆ.

2018ನೇ ಇಸವಿಯಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಚೊಚ್ಚಲ ಹಾಗೂ ಐತಿಹಾಸಿಕ ಟೆಸ್ಟ್ ಸರಣಿ ಗೆಲುವು ದಾಖಲಿಸಿತ್ತು.

ಟೀಮ್ ಇಂಡಿಯಾ ಆಡುವ ಬಳಗ ಇಂತಿದೆ:
ವಿರಾಟ್ ಕೊಹ್ಲಿ (ನಾಯಕ), ಪೃಥ್ವಿ ಶಾ, ಮಯಂಕ್ ಅಗರವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ ಮತ್ತು ಜಸ್‌ಪ್ರೀತ್ ಬುಮ್ರಾ.

ಕ್ಯಾಮರೂನ್ ಗ್ರೀನ್ ಡೆಬ್ಯು...
ಅತ್ತ ಆಸೀಸ್ ಪರ ಯುವ ಆಟಗಾರ ಕ್ಯಾಮರೂನ್ ಗ್ರೀನ್ ಪದಾರ್ಪಣೆ ಮಾಡಿದ್ದಾರೆ. ನಾಯಕ ಹಾಗೂ ಟಿಮ್ ಪೇನ್ ಮುನ್ನಡೆಸುವ ತಂಡದಲ್ಲಿ ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಷೇನ್, ಪ್ಯಾಟ್ ಕಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ಮುಂತಾದ ಪ್ರಮುಖ ಆಟಗಾರರಿದ್ದಾರೆ.

ಆಸ್ಟ್ರೇಲಿಯಾ ಆಡುವ ಬಳಗ ಇಂತಿದೆ:
ಜೋ ಬರ್ನ್ಸ್, ಮ್ಯಾಥ್ಯೂ ವೇಡ್, ಮಾರ್ನಸ್ ಲಾಬುಷೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಟಿಮ್ ಪೇನ್ (ನಾಯಕ, ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಥನ್ ಲಿಯನ್, ಜೋಶ್ ಹ್ಯಾಜಲ್‌ವುಡ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT