IND vs AUS T20: ವೇಡ್ 25 ಬಾಲ್ ಫಿಫ್ಟಿ; ಭಾರತಕ್ಕೆ 195 ರನ್ ಗೆಲುವಿನ ಗುರಿ

ಸಿಡ್ನಿ: ಭಾನುವಾರ ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಪ್ರವಾಸಿ ಭಾರತ ವಿರುದ್ಧ ನಡೆಯುತ್ತಿರುವ ಟ್ವೆಂಟಿ-20 ಸರಣಿಯ ದ್ವಿತೀಯ 'ಮಾಡು ಇಲ್ಲವೇ ಮಡಿ' ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗಿಳಿಸಲ್ಪಟ್ಟಿರುವ ಆಸ್ಟ್ರೇಲಿಯಾ ತಂಡವು ನಿರ್ಧಾರಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 194 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ.
ಇದರೊಂದಿಗೆ ಭಾರತ ಸರಣಿ ಗೆಲುವು ದಾಖಲಿಸಲು 195 ರನ್ ಗಳಿಸಬೇಕಾದ ಅಗತ್ಯವಿದೆ.
ನಾಯಕ ಆ್ಯರನ್ ಫಿಂಚ್ ಅನುಪಸ್ಥಿತಿಯಲ್ಲಿ ಡಾರ್ಸಿ ಶಾಟ್ ಜೊತೆಗೆ ಆರಂಭಿಕನಾಗಿ ಕಣಕ್ಕಿಳಿದ ನಾಯಕ ಮ್ಯಾಥ್ಯೂ ವೇಡ್ ತಂಡಕ್ಕೆ ಬಿರುಸಿನ ಆರಂಭವೊದಗಿಸಿದರು. ಭಾರತೀಯ ಬೌಲರ್‌ಗಳನ್ನು ನಿರ್ದಯವಾಗಿ ದಂಡಿಸಿದ ವೇಡ್ ತಂಡವನ್ನು ಉತ್ತಮ ಮೊತ್ತದತ್ತ ಮುನ್ನಡೆಸಿದರು.
ಇದನ್ನೂ ಓದಿ: IND vs AUS T20:ಶಾರ್ದೂಲ್, ಶ್ರೇಯಸ್ ಇನ್; ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಇವರಿಬ್ಬರು ಮೊದಲ ವಿಕೆಟ್‌ಗೆ 4.3 ಓವರ್‌ಗಳಲ್ಲೇ 47 ರನ್‌ಗಳ ಜೊತೆಯಾಟ ನೀಡಿದರು. ಈ ಹಂತದಲ್ಲಿ ದಾಳಿಗಿಳಿದ ಎಡಗೈ ವೇಗದ ಬೌಲರ್ ತಂಗರಸು ನಟರಾಜನ್, ಡಾರ್ಸಿ ಶಾರ್ಟ್ (9) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
Natarajan is delighted #AUSvIND pic.twitter.com/H23Sqa4oyW
— cricket.com.au (@cricketcomau) December 6, 2020
ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ವೇಡ್ 25 ಎಸೆತಗಳಲ್ಲೇ ಅರ್ಧಶತಕ ಸಾಧನೆ ಮಾಡಿದರು. ಈ ಮೂಲಕ ತಮಗೆ ನೀಡಿರುವ ಹೆಚ್ಚುವರಿ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರು. ಅದರೆ ರನೌಟ್‌ಗೆ ಬಲಿಯಾಗುವ ಮೂಲಕ ಪೆವಿಲಿಯನ್‌ನತ್ತ ಹೆಜ್ಜೆ ಹಾಕಬೇಕಾಯಿತು. ಡಾರ್ಸಿ ಶಾರ್ಟ್ ಪತನದ ವೇಳೆಯಲ್ಲಿ ಆಸೀಸ್ ಎಂಟು ಓವರ್‌ಗಳಲ್ಲಿ 75 ರನ್ ಪೇರಿಸಿತ್ತು. 32 ಎಸೆತಗಳನ್ನು ಎದುರಿಸಿದ ಶಾರ್ಟ್ 10 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 58 ರನ್ ಗಳಿಸಿದರು.
ಈ ಹಂತದಲ್ಲಿ ಜೊತೆಗೂಡಿದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ಆವೇಗದೊಂದಿಗೆ ರನ್ ಪೇರಿಸತೊಡಗಿದರು. ಮ್ಯಾಕ್ಸ್‌ವೆಲ್ ಹೊರದಬ್ಬಿದ ಶಾರ್ದೂಲ್ ಠಾಕೂರ್ ಕೊನೆಗೂ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. 13 ಎಸೆತಗಳನ್ನು ಎದುರಿಸಿದ ಮ್ಯಾಕ್ಸ್‌ವೆಲ್ ಎರಡು ಸಿಕ್ಸರ್‌ಗಳಿಂದ 22 ರನ್ ಗಳಿಸಿದರು.
ಇದನ್ನೂ ಓದಿ: IND vs AUS T20: ಚುಟುಕು ಕದನದಲ್ಲಿ ಭಾರತಕ್ಕೆ ರೋಚಕ ಗೆಲುವು
ಕೊನೆಯ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸ್ಟೀವನ್ ಸ್ಮಿತ್ ಹಾಗೂ ಮೊಯಿಸೆಸ್ ಹೆನ್ರಿಕ್ಸ್ ತಂಡವನ್ನು ಸವಾಲಿನ ಮೊತ್ತದತ್ತ ಮುನ್ನಡೆಸಿದರು. ಕೇವಲ ನಾಲ್ಕು ರನ್‌ಗಳಿಂದ ಅರ್ಧಶತಕ ವಂಚಿತರಾದ ಸ್ಮಿತ್ 38 ಎಸೆತಗಳಲ್ಲಿ 13 ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳಿಂದ 46 ರನ್ ಗಳಿಸಿದರು.
How easy is captaincy? 😅
A 25-ball 50 for Matthew Wade #AUSvIND pic.twitter.com/iosEH4pwtP
— cricket.com.au (@cricketcomau) December 6, 2020
ಅಂತಿಮವಾಗಿ ಆಸೀಸ್ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 194 ರನ್‌ಗಳ ಬೃಹತ್ ಮೊತ್ತ ಪೇರಿಸಿತು. 18 ಎಸೆತಗಳನ್ನು ಎದುರಿಸಿದ ಹೆನ್ರಿಕ್ಸ್ ಸಿಕ್ಸರ್ ನೆರವಿನಿಂದ 26 ರನ್ ಗಳಿಸಿದರು. ಇನ್ನುಳಿದಂತೆ ಮಾರ್ಕಸ್ ಸ್ಟೋಯಿನಿಸ್ (16*) ಹಾಗೂ ಡ್ಯಾನಿಯಲ್ ಸ್ಯಾಮ್ಸ್ (8*) ರನ್ ಗಳಿಸಿದರು.
ಭಾರತದ ಪರ ತಂಗರಸು ನಟರಾಜನ್ ಹೊರತುಪಡಿಸಿ ಬಹುತೇಕ ಎಲ್ಲ ಬೌಲರ್‌ಗಳು ದುಬಾರಿಯೆನಿಸಿದರು. ನಟರಾಜನ್ 20 ರನ್ ಮಾತ್ರ ಬಿಟ್ಟುಕೊಟ್ಟು ಎರಡು ಪ್ರಮುಖ ವಿಕೆಟ್‌ಗಳನ್ನು ಪಡೆದು ಮಿಂಚಿದರು. ಕಳೆದ ಪಂದ್ಯದ ಹೀರೊ ಯಜುವೇಂದ್ರ ಚಹಲ್ ಒಂದು ವಿಕೆಟ್ ಪಡೆದರೂ ತಮ್ಮ ನಾಲ್ಕು ಓವರ್‌ಗಳ ಕೋಟಾದಲ್ಲಿ 51 ರನ್ ಬಿಟ್ಟುಕೊಟ್ಟು ಸಾಕಷ್ಟು ದಂಡಿಸಿಕೊಂಡರು.
ಇದನ್ನೂ ಓದಿ: ಚಾಹಲ್-ರಾಹುಲ್, ಜಡೇಜ-ನಟರಾಜ ಗೆಲುವಿನ ಸ್ಟಾರ್ಸ್; ಪ್ರಮುಖ ಹೈಲೈಟ್ಸ್ ಇಲ್ಲಿದೆ
ಶಾರ್ದೂಲ್, ಶ್ರೇಯಸ್ ಇನ್; ಭಾರತ ಫೀಲ್ಡಿಂಗ್
ಈ ಮೊದಲು ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡರು.
Chahal strikes and Smith departs for 46.
Live - https://t.co/WI62tVqCtK #AUSvIND pic.twitter.com/1HAzppJp9t
— BCCI (@BCCI) December 6, 2020
ಭಾರತ ತಂಡದಲ್ಲಿ ಪ್ರಮುಖವಾಗಿ ಮೂರು ಬದಲಾವಣೆಗಳನ್ನು ತರಲಾಗಿದೆ. ಗಾಯದಿಂದಾಗಿ ವಿಶ್ರಾಂತಿಯಲ್ಲಿರುವ ರವೀಂದ್ರ ಜಡೇಜಾ ಸ್ಥಾನದಲ್ಲಿ ಯಜುವೇಂದ್ರ ಚಹಲ್ ಕಾಣಿಸಿಕೊಂಡಿದ್ದಾರೆ. ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿಗೆ ವಿಶ್ರಾಂತಿ ಒದಗಿಸಲಾಗಿದ್ದು, ಇವರ ಸ್ಥಾನವನ್ನು ಶಾರ್ದೂಲ್ ಠಾಕೂರ್ ಪಡೆದಿದ್ದಾರೆ. ಹಾಗೆಯೇ ಮಧ್ಯಮ ಕ್ರಮಾಂಕದಲ್ಲಿ ಮನೀಷ್ ಪಾಂಡೆ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.
ಕ್ಯಾನ್‌ಬೆರಾದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 11 ರನ್ ಅಂತರದ ಗೆಲುವು ದಾಖಲಿಸಿತ್ತು. ಕಂಕಷನ್ ಬದಲಿ ಆಟಗಾರನ ರೂಪದಲ್ಲಿ ಕಣಕ್ಕಿಳಿದಿದ್ದ ಯಜುವೇಂದ್ರ ಚಹಲ್ ಟೀಮ್ ಇಂಡಿಯಾ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಅತ್ತ ಹೆಲ್ಮೆಟ್‌ಗೆ ಚೆಂಡು ಅಪ್ಪಳಿಸಿದ ಪರಿಣಾಮ ಗಾಯಕ್ಕೆ ತುತ್ತಾಗಿರುವ ರವೀಂದ್ರ ಜಡೇಜ ಸೇವೆಯಿಂದ ಟೀಮ್ ಇಂಡಿಯಾ ವಂಚಿತವಾಗಿದೆ.
ಇದನ್ನೂ ಓದಿ: ಯಜುವೇಂದ್ರ ಚಾಹಲ್ರನ್ನು ಆಡಿಸುವ ಇರಾದೆ ಇರಲಿಲ್ಲ: ವಿರಾಟ್ ಕೊಹ್ಲಿ
ಫಿಂಚ್, ಸ್ಟಾರ್ಕ್ ಅನುಪಸ್ಥಿತಿ; ವೇಡ್ ನಾಯಕ
ಅತ್ತ ಆಸ್ಟ್ರೇಲಿಯಾ ತಂಡದಲ್ಲಿ ಗಾಯದ ಸಮಸ್ಯೆ ಎದುರಿಸುತ್ತಿರುವ ಆ್ಯರನ್ ಫಿಂಚ್ ಅನುಪಸ್ಥಿತಿ ಎದ್ದು ಕಾಣಿಸಿದೆ. ಈ ಹಿನ್ನೆಲೆಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮ್ಯಾಥ್ಯೂ ವೇಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅದೇ ರೀತಿ ವೈಯಕ್ತಿಕ ಕಾರಣಗಳಿಂದಾಗಿ ಮಿಚೆಲ್ ಸ್ಟಾರ್ಕ್ ಸೇವೆಯಿಂದಲೂ ಆಸೀಸ್ ವಂಚಿತವಾಗಿದೆ. ಜೋಶ್ ಹ್ಯಾಜಲ್‌ವುಡ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಇವರೆಲ್ಲರ ಸ್ಥಾನಕ್ಕೆ ಡ್ಯಾನಿಯಲ್ ಸ್ಯಾಮ್ಸ್, ಮಾರ್ಕಸ್ ಸ್ಟೋಯಿನಿಸ್ ಹಾಗೂ ಆಂಡ್ರ್ಯೂ ಟೈ ಅವರನ್ನು ಆಯ್ಕೆ ಮಾಡಲಾಗಿದೆ.
Australia finish their 20 overs on 5-194!
SCORECARD: https://t.co/KEpZrVTqWs#AUSvIND pic.twitter.com/2uS08Zdkkb
— cricket.com.au (@cricketcomau) December 6, 2020
ಆಡುವ ಬಳಗ ಇಂತಿದೆ:
ಭಾರತ: ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಟಿ ನಟರಾಜನ್, ಯಜುವೇಂದ್ರ ಚಹಲ್
ಆಸ್ಟ್ರೇಲಿಯಾ: ಡಾರ್ಸಿ ಶಾರ್ಟ್, ಮಾರ್ಕಸ್ ಸ್ಟೋಯಿನಿಸ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಯಿಸೆಸ್ ಹೆನ್ರಿಕ್ಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್, ನಾಯಕ), ಡ್ಯಾನಿಯಲ್ ಸ್ಯಾಮ್ಸ್, ಸೀನ್ ಅಬಾಟ್, ಮಿಚೆಲ್ ಸ್ವೆಪ್ಸನ್, ಆ್ಯಡಂ ಜಂಪಾ ಮತ್ತು ಆಂಡ್ರ್ಯೂ ಟೈ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.