ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AUS: ನಾಲ್ಕನೇ ದಿನದಾಟ ಮುಕ್ತಾಯ; ಭಾರತದ ಗೆಲುವಿಗೆ ಬೇಕಿದೆ 309 ರನ್‌

Last Updated 10 ಜನವರಿ 2021, 8:26 IST
ಅಕ್ಷರ ಗಾತ್ರ

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (ಎಸ್‌ಸಿಜಿ) ನಡೆಯುತ್ತಿರುವ ಆಸ್ಟ್ರೇಲಿಯಾ ಎದುರಿನ ಮೂರನೇ ಟೆಸ್ಟ್‌ ಪಂದ್ಯ ಗೆಲ್ಲಲು ಭಾರತಕ್ಕೆ 309 ರನ್‌ಗಳ ಅಗತ್ಯವಿದೆ.

ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 34 ಓವರ್‌ಗಳಲ್ಲಿ ಎರಡು ವಿಕೆಟ್‌ ನಷ್ಟಕ್ಕೆ 98 ರನ್‌ ಗಳಿಸಿದೆ. ರೋಹಿತ್‌ ಶರ್ಮಾ (52) ಅರ್ಧಶತಕ, ಶುಭಮನ್‌ ಗಿಲ್‌ 31 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು.

ಆಸ್ಟ್ರೇಲಿಯಾ ಪರ ಜೋಶ್ ಹ್ಯಾಜಲ್‌ವುಡ್‌ ಹಾಗೂ ಪ್ಯಾಟ್ ಕಮಿನ್ಸ್ ತಲಾ ಒಂದು ವಿಕೆಟ್‌ ಪಡೆದಿದ್ದಾರೆ.

ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಆಸೀಸ್‌ ಪಡೆ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ ನಷ್ಟಕ್ಕೆ 312 ರನ್‌ ಗಳಿಸಿತ್ತು. ಈ ಮಾರ್ನಸ್ ಲಾಬುಷೇನ್ (73), ಸ್ಟೀವನ್ ಸ್ಮಿತ್ (81),ಕ್ಯಾಮರಾನ್ ಗ್ರೀನ್ (84) ರನ್‌ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು. ಒಟ್ಟಾರೆ 407 ರನ್‌ಗಳ ಮುನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡ ಡಿಕ್ಲೇರ್ ಮಾಡಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT