ಶನಿವಾರ, ಜನವರಿ 23, 2021
28 °C

IND vs AUS | 407 ರನ್‌ಗಳ ಬೃಹತ್‌ ಮುನ್ನಡೆ ಸಾಧಿಸಿದ ಆಸ್ಟ್ರೇಲಿಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (ಎಸ್‌ಸಿಜಿ) ಭಾರತದ ಎದುರು ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 407 ರನ್‌ಗಳ ಭಾರೀ ಮುನ್ನಡೆ ಸಾಧಿಸಿದ್ದು, ಇನ್ನಿಂಗ್ಸ್‌ ಡಿಕ್ಲೇರ್ ಮಾಡಿಕೊಂಡಿದೆ.

ಮಾರ್ನಸ್ ಲಾಬುಷೇನ್ (73), ಸ್ಟೀವನ್ ಸ್ಮಿತ್ (81), ಕ್ಯಾಮರಾನ್ ಗ್ರೀನ್  (84) ರನ್‌ ಗಳಿಸಿ ತಂಡಕ್ಕೆ ಆಸರೆಯಾದರು.

ಭಾರತದ ಪರ ನವದೀಪ್‌ ಸೈನಿ 2, ಆರ್‌.ಅಶ್ವಿನ್‌ 2, ಬೂಮ್ರಾ ಹಾಗೂ ಸಿರಾಜ್‌ ತಲಾ ಒಂದು ವಿಕೆಟ್‌ ಪಡೆದರು.

ಸದ್ಯ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಭಾರತ 2 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 4 ರನ್‌ ಗಳಿಸಿದೆ. (ರೋಹಿತ್‌ ಶರ್ಮಾ 3*, ಶುಭಮನ್‌ ಗಿಲ್‌ 1*)

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು