ಬುಧವಾರ, ಆಗಸ್ಟ್ 17, 2022
25 °C

IND vs AUS| ಟೀಂ ಇಂಡಿಯಾ ಸಾಧನೆ ಕೊಂಡಾಡಿದ ರಾಷ್ಟ್ರಪತಿ, ಪ್ರಧಾನಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್‌ ಕ್ರಿಕೆಟ್‌ ಸರಣಿ ಗೆದ್ದು ತ್ರಿವಿಕ್ರಮ ಮೆರೆದಿರುವ ಭಾರತೀಯ ಕ್ರಿಕೆಟ್‌ ತಂಡವನ್ನು ದೇಶದ ಪ್ರಮುಖರು ಹಾಡಿ ಹೊಗಳಿದ್ದಾರೆ. ಅವರ ಸಾಧನೆಯನ್ನು ಕೊಂಡಾಡಿದ್ದಾರೆ.

ರಾಷ್ಟ್ರ ಹೆಮ್ಮೆ ಪಟ್ಟಿದೆ- ರಾಮನಾಥ ಕೋವಿಂದ್‌

'ಆಸ್ಟ್ರೇಲಿಯಾದಲ್ಲಿ ಇದು ಐತಿಹಾಸಿಕ ಕ್ರಿಕೆಟ್‌ ದಿಗ್ವಿಜಯ. ಕಠಿಣ ಟೆಸ್ಟ್ ಸರಣಿಯನ್ನು ಗೆದ್ದ ಭಾರತದ ಪ್ರತಿಭಾವಂತ ಯುವ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ತಂಡವು ಅಸಾಧಾರಣ ಕೌಶಲ ಮತ್ತು ಸ್ಥಿತಿಸ್ಥಾಪಕತೆ ಪ್ರದರ್ಶಿಸಿದೆ. ಅವರ ಸಾಧನೆಯ ಬಗ್ಗೆ ರಾಷ್ಟ್ರ ಹೆಮ್ಮೆಪಡುತ್ತದೆ,' ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಟ್ವೀಟ್‌ ಮಾಡಿದ್ದಾರೆ.

ನಾವೆಲ್ಲರೂ ಖುಷಿಪಟ್ಟಿದ್ದೇವೆ- ಮೋದಿ

'ಆಸ್ಟ್ರೇಲಿಯಾದಲ್ಲಿನ ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ನಾವೆಲ್ಲರೂ ಖುಷಿಪಟ್ಟಿದ್ದೇವೆ. ಅವರ ಗಮನಾರ್ಹ ಶಕ್ತಿ ಮತ್ತು ಉತ್ಸಾಹ ಸರಣಿಯುದ್ಧಕ್ಕೂ ಪ್ರದರ್ಶನಗೊಂಡಿದೆ. ಪುಟಿದೇಳುವ ಚಲ, ದೃಢ ಸಂಕಲ್ಪವೂ ಕೂಡ. ತಂಡಕ್ಕೆ ಅಭಿನಂದನೆಗಳು. ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು,' ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತಮವಾಗಿ ಆಡಿದ ಭಾರತ - ಶಾ

'ಐತಿಹಾಸಿಕ ಸರಣಿ ಗೆಲುವು ದಾಖಲಿಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಿಮ್ಮ ಗಮನಾರ್ಹ ಸಾಧನೆಯ ಬಗ್ಗೆ ಇಡೀ ರಾಷ್ಟ್ರ ಹೆಮ್ಮೆಪಡುತ್ತದೆ. ಭಾರತ ಉತ್ತಮವಾಗಿ ಆಡಿದೆ,' ಎಂದು ಗೃಹ ಸಚಿವ ಅಮಿತ್‌ ಶಾ ಶ್ಲಾಘಿಸಿದ್ದಾರೆ.

ಬ್ರಿಸ್ಬೇನ್‌ನಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 3 ವಿಕೆಟ್‌ಗಳಿಂದ ಮಣಿಸುವ ಮೂಲಕ ಭಾರತ 4 ಪಂದ್ಯಗಳ ಟೆಸ್ಟ್ ಸರಣಿಯನ್ನು 2–1 ಅಂತರದಿಂದ ಗೆದ್ದುಕೊಂಡಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ನೀಡಿದ್ದ 328 ರನ್ ಗುರಿ ಬೆನ್ನತ್ತಿದ ಭಾರತ ಅಂತಿಮ ದಿನದ ಕೊನೆಯ ಅವಧಿಯಲ್ಲಿ 7 ವಿಕೆಟ್ ಕಳೆದುಕೊಂಡು 329 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು